ಮೂಡಿಗೆರೆ, ಸೆಪ್ಟೆಂಬರ್ 1: ಕಾನನಹಳ್ಳಿ ಕಾಡು ಪ್ರದೇಶದಲ್ಲಿ ಕಾಡಾನೆಗಳು ಕಂಡುಬಂದಿದ್ದು, ರಾತ್ರಿ ವೇಳೆಯಲ್ಲಿ ಟಾಟಾ ಕಾಫಿ ಎಸ್ಟೇಟ್ ಹಾಗೂ ಜಿ. ಹೊಸಹಳ್ಳಿ ಭಾಗದತ್ತ ಕಾಡಾನೆಗಳು ಬರುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಜಿ. ಹೊಸಹಳ್ಳಿ, ಪೋಡಿಯ ಕಾಲೋನಿ, ದಿಣ್ಣೆಕೆರೆ ಹಾಗೂ ಕೆಮ್ಮಣ್ಣು ಗಂಡಿ ಸುತ್ತಮುತ್ತಲಿನ ಗ್ರಾಮಸ್ಥರು, ಕಾರ್ಮಿಕರು ಹಾಗೂ ವಾಹನ ಸವಾರರು ರಾತ್ರಿ ವೇಳೆಯಲ್ಲಿ ಹೆಚ್ಚಿನ ಎಚ್ಚರಿಕೆಯಿಂದ ಸಂಚರಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.

ಕಾಡಾನೆಗಳು ಕಂಡುಬಂದಲ್ಲಿ ಅವುಗಳನ್ನು ಹತ್ತಿರದಿಂದ ವೀಕ್ಷಿಸಲು ಅಥವಾ ಹಿಂಬಾಲಿಸಲು ಪ್ರಯತ್ನಿಸದೆ, ತಕ್ಷಣವೇ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ: 7204004261 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ದಿನಾಂಕ: 01-09-2026
ಸಮಯ: ಸಂಜೆ 6:20.