ಮೂಡಿಗೆರೆ, ಆಗಸ್ಟ್ 26: ಭುವನೇಶ್ವರಿ ಗುಂಪಿನ ಕಾಡಾನೆಗಳು ಕಸ್ಕೆಬೈಲ್–ಕಲ್ಲುಗುಡ್ಡ ಪ್ರದೇಶದ ಪಲ್ಲವಿ ಮೇಡಂ ಅವರ ತೋಟದಲ್ಲಿ ಕಂಡುಬಂದಿರುವ ಹಿನ್ನೆಲೆಯಲ್ಲಿ, ಅರಣ್ಯ ಇಲಾಖೆ ಮೂಡಿಗೆರೆ ವತಿಯಿಂದ ಸುತ್ತಮುತ್ತಲಿನ ಗ್ರಾಮಸ್ಥರು, ಕಾರ್ಮಿಕರು ಹಾಗೂ ವಾಹನ ಸವಾರರಿಗೆ ಎಚ್ಚರಿಕೆ ನೀಡಲಾಗಿದೆ.

ಕಸ್ಕೆಬೈಲ್, ಕಮ್ಮಾರಗೋಡು, ಕಲ್ಲುಗುಡ್ಡ, ಚಟ್ಟನಹಳ್ಳಿ, ಹಾಸ್ಟೆಲ್ ಕಾಡು, ಹುಲಿಹಂಡ್ಲು ಎಸ್ಟೇಟ್ ಹಾಗೂ ಕಾರಬೈಲು ಗ್ರಾಮಗಳ ಸುತ್ತಮುತ್ತ ಕಾಡಾನೆಗಳ ಸಂಚಾರ ಇರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.

ಕಾಡಾನೆಗಳು ಕಂಡುಬಂದಲ್ಲಿ ಸಾರ್ವಜನಿಕರು ಅವುಗಳ ಸಮೀಪ ಹೋಗದೆ, ಅವುಗಳನ್ನು ಕೆಣಕದೆ ಸುರಕ್ಷಿತ ಅಂತರ ಕಾಯ್ದುಕೊಂಡು, ತಕ್ಷಣ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 7204004261ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ಪ್ರಕಟಣೆ ಸಮಯ: 26-08-2026, ಬೆಳಿಗ್ಗೆ 08:09.