ಮೂಡಿಗೆರೆ, ಆ.28: ಭುವನೇಶ್ವರಿ ಗುಂಪಿನ ಕಾಡಾನೆಗಳು ಟಿ.ಸಿ. ರುದ್ರೇಗೌಡ ಅವರ ತೋಟದ ಕಾಡು ಪ್ರದೇಶದಲ್ಲಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು, ಕಾರ್ಮಿಕರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಇರುವಂತೆ ಮೂಡಿಗೆರೆ ಅರಣ್ಯ ಇಲಾಖೆ ಸಾರ್ವಜನಿಕರಿಗೆ ಸೂಚನೆ ನೀಡಿದೆ.
ಕಾಡಾನೆಗಳು ಹೊಸಪುರ, ಆನೆ ಮಲ್ಲಪ್ಪ ಗುಡ್ಡ, ಸಾಲುಮರ, ಜಿ. ಹೊಸಹಳ್ಳಿ, ಹಸಿರು ಕಾಡು ಎಸ್ಟೇಟ್ ಹಾಗೂ ವಿನಾಯಕ ಎಸ್ಟೇಟ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚರಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಮನವಿ ಮಾಡಿದೆ.
ಕಾಡಾನೆಗಳು ಕಂಡುಬಂದಲ್ಲಿ ಅವುಗಳ ಸಮೀಪಕ್ಕೆ ತೆರಳದೆ, ತಕ್ಷಣ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ: 7204004261 ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಅರಣ್ಯ ಇಲಾಖೆ ತಿಳಿಸಿದೆ.
ಈ ಎಚ್ಚರಿಕೆಯನ್ನು 28.08.2026ರಂದು ಸಂಜೆ 6.20ಕ್ಕೆ ಅರಣ್ಯ ಇಲಾಖೆ ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರಕಟಿಸಿದೆ.
ಕಾಡಾನೆಗಳ ಸಂಚಾರ: ಸಾರ್ವಜನಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!
GNE UPDATES
ಇತ್ತೀಚಿನ ಸುದ್ದಿ