ಮೂಡಿಗೆರೆ, ಸೆಪ್ಟೆಂಬರ್ 4: ಮೂಡಿಗೆರೆ ಅರಣ್ಯ ಇಲಾಖೆ ವ್ಯಾಪ್ತಿಯ ಜಿ. ಹೊಸಹಳ್ಳಿ ಟಾಟಾ ಕಾಫಿ ಎಸ್ಟೇಟ್‌ನಲ್ಲಿ ಕಾಡಾನೆಗಳು ಕಂಡುಬಂದಿದ್ದು, ಒಂದು ಒಂಟಿ ಕಾಡಾನೆಯು ಜಿ. ಹೊಸಹಳ್ಳಿ ಟಾಟಾ ಎಸ್ಟೇಟ್‌ನ ಮಜರ್ ಸಾಬ್ರು ಅವರ ತೋಟದ ಕಡೆಗೆ ಸಂಚರಿಸುತ್ತಿರುವುದು ಕಂಡುಬಂದಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಜಿ. ಹೊಸಹಳ್ಳಿ, ಸಿಲ್ವರ್ ಖಾನ್ ಎಸ್ಟೇಟ್, ಪೋಡಿಯ ಕಾಲೋನಿ, ದಿಣ್ಣೆಕೆರೆ ಹಾಗೂ ಕೆಮ್ಮಣ್ಣು ಗಂಡಿ ಸುತ್ತಮುತ್ತಲಿನ ಗ್ರಾಮಸ್ಥರು, ಕಾರ್ಮಿಕರು ಹಾಗೂ ವಾಹನ ಸವಾರರು ಹೆಚ್ಚಿನ ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
ರಾತ್ರಿ ಹಾಗೂ ಮುಂಜಾನೆ ಸಮಯದಲ್ಲಿ ಸಂಚರಿಸುವಾಗ ವಿಶೇಷ ಎಚ್ಚರಿಕೆ ವಹಿಸುವಂತೆ ಹಾಗೂ ಕಾಡಾನೆಗಳಿರುವ ಪ್ರದೇಶಗಳಿಗೆ ತೆರಳದಂತೆ ಸೂಚಿಸಲಾಗಿದೆ.
ಕಾಡಾನೆ ಕಂಡುಬಂದಲ್ಲಿ ಸಾರ್ವಜನಿಕರು ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿಗೆ 7204004261 ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
ದಿನಾಂಕ: 04-09-2026
ಸಮಯ: ಸಂಜೆ 5:58.
ಕಾಡಾನೆ ಸಂಚಾರ: ಗ್ರಾಮಸ್ಥರು, ಕಾರ್ಮಿಕರು ಹಾಗೂ ವಾಹನ ಸವಾರರಿಗೆ ಎಚ್ಚರಿಕೆ!
GNE UPDATES
ಇತ್ತೀಚಿನ ಸುದ್ದಿ