ಮೂಡಿಗೆರೆ, ಸೆಪ್ಟೆಂಬರ್ 18: ಮೂಡಿಗೆರೆ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಒಂಟಿ ಕಾಡಾನೆಯೊಂದು ಕಾರ್ ಬೈಲು ಶಿವಾನಂದ್ ಅವರ ತೋಟದಲ್ಲಿ ಕಂಡುಬಂದಿರುವ ಹಿನ್ನೆಲೆಯಲ್ಲಿ, ಸುತ್ತಮುತ್ತಲಿನ ಗ್ರಾಮಸ್ಥರು, ಕಾರ್ಮಿಕರು ಹಾಗೂ ವಾಹನ ಸವಾರರು ಅತ್ಯಂತ ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
ಕಾಡಾನೆ ಕಾರ್ ಬೈಲು, ಮೂಡಸಸಿ, ಹುಲಿಹಂಡ್ಲು ಎಸ್ಟೇಟ್, ಚೇತನಹಳ್ಳಿ ಹಾಗೂ ಕಲ್ಲುಗುಡ್ಡ ಗ್ರಾಮಗಳ ಸುತ್ತಮುತ್ತ ಸಂಚರಿಸುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು. ವಿಶೇಷವಾಗಿ ಕಾಡಾನೆ ಇರುವ ಪ್ರದೇಶಗಳಲ್ಲಿ ಅನಗತ್ಯವಾಗಿ ಸಂಚರಿಸದಂತೆ ಹಾಗೂ ಎಚ್ಚರಿಕೆಯಿಂದ ಇರುವಂತೆ ಇಲಾಖೆ ಸೂಚಿಸಿದೆ.
ಕಾಡಾನೆ ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣವೇ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 7204004261ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಅರಣ್ಯ ಇಲಾಖೆ ತಿಳಿಸಿದೆ.
ಕಾಡಾನೆ ಕಂಡುಬಂದ ಸಮಯ: 18.09.2026, ಬೆಳಿಗ್ಗೆ 09:03.
ಕಾಡಾನೆ ಸಂಚಾರ: ಗ್ರಾಮಸ್ಥರು, ಕಾರ್ಮಿಕರು ಹಾಗೂ ವಾಹನ ಸವಾರರಿಗೆ ಎಚ್ಚರಿಕೆ!
GNE UPDATES
ಇತ್ತೀಚಿನ ಸುದ್ದಿ