ಮೂಡಿಗೆರೆ, ನವೆಂಬರ್ 22: ಕಾನನಹಳ್ಳಿ ಅರಣ್ಯ ಪ್ರದೇಶದಲ್ಲಿ ಎರಡು ಕಾಡಾನೆಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು, ತೋಟದ ಕಾರ್ಮಿಕರು ಹಾಗೂ ಗ್ರಾಮಸ್ಥರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಮೂಡಿಗೆರೆ ಅರಣ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಕಾನನಹಳ್ಳಿ ಕಾಡಿನಲ್ಲಿ ಎರಡು ಕಾಡಾನೆಗಳು ಸಂಚರಿಸುತ್ತಿರುವುದರಿಂದ ಜಿ. ಹೊಸಹಳ್ಳಿ ಟಾಟಾ ಕಾಫಿ ಎಸ್ಟೇಟ್, ಸಿಲ್ವರ್ ಖಾನ್ ಎಸ್ಟೇಟ್, ಜಿ. ಹೊಸಹಳ್ಳಿ ಗ್ರಾಮ, ಪೋಡಿ ಕಾಲೋನಿ, ಹೊಸಪುರ, ಬಾಸುರ, ದಿಣ್ಣೆಕೆರೆ ಹಾಗೂ ಹಿರೇಶಿಗರ ಗ್ರಾಮಗಳ ಸುತ್ತಮುತ್ತಲಿನ ನಿವಾಸಿಗಳು ಮತ್ತು ಕಾರ್ಮಿಕರು ಜಾಗರೂಕತೆಯಿಂದ ಇರಬೇಕೆಂದು ಅರಣ್ಯ ಇಲಾಖೆ ಮನವಿ ಮಾಡಿದೆ.

ತಮ್ಮ ಗ್ರಾಮಗಳ ಸುತ್ತಮುತ್ತ ಕಾಡಾನೆಗಳ ಸಂಚಾರ ಕಂಡುಬಂದಲ್ಲಿ ತಕ್ಷಣ ಜಿಲ್ಲಾ ಆನೆ ಕಾರ್ಯಪಡೆಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ತುರ್ತು ಸಂಪರ್ಕ ಸಂಖ್ಯೆ: 7204004261

ಕಾಡಾನೆಗಳ ಚಲನವಲನದ ಬಗ್ಗೆ ಎಚ್ಚರಿಕೆ ವಹಿಸುವುದರ ಜೊತೆಗೆ, ಸಾರ್ವಜನಿಕರು ಹಾಗೂ ಕಾರ್ಮಿಕರು ಯಾವುದೇ ಅಪಾಯಕಾರಿ ಸಾಹಸಕ್ಕೆ ಮುಂದಾಗದೆ ಅರಣ್ಯ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.

ಮಾಹಿತಿ ಸಮಯ: 22-11-2026, ಬೆಳಿಗ್ಗೆ 7:08.