ಮೂಡಿಗೆರೆ, ನವೆಂಬರ್ 25:
ಚಿಕ್ಕಮಗಳೂರು ಜಿಲ್ಲಾ ಆನೆ ಕಾರ್ಯಪಡೆ ಹಾಗೂ ಮೂಡಿಗೆರೆ ಅರಣ್ಯ ಇಲಾಖೆಯ ವತಿಯಿಂದ ಸಾರ್ವಜನಿಕರಿಗೆ ಕಾಡಾನೆಗಳ ಸಂಚಾರದ ಕುರಿತು ತುರ್ತು ಎಚ್ಚರಿಕೆ ನೀಡಲಾಗಿದೆ.
ನವೆಂಬರ್ 25ರಂದು ಸಂಜೆ 4:40ರ ವೇಳೆಗೆ ಲಭ್ಯವಾದ ಮಾಹಿತಿಯ ಪ್ರಕಾರ, ಕಾಡಾನೆಗಳ ಗುಂಪು ಕಾರ್ ಬೈಲು ಗ್ರಾಮದ ಮಂಜುನಾಥ್ ಗೌಡ ಅವರ ತೋಟದಿಂದ ಕಾರ್ ಬೈಲು ಕಡೆಗೆ ಸಂಚರಿಸುತ್ತಿದೆ.
ಈ ಹಿನ್ನೆಲೆಯಲ್ಲಿ ಬಾರದಹಳ್ಳಿ, ಮಾಕೋನಹಳ್ಳಿ, ಹೊರಟ್ಟಿ, ಮೂಡಸಸಿ, ತುದಿಯಲ, ಬಾರೀಕೆರೆ, ಗೌತಹಳ್ಳಿ, ಪುರ, ಗಬ್ಬಳ್ಳಿ, ಬೇವಿನಗುಡ್ಡೆ, ಕಾರ್ ಬೈಲು ಹಾಗೂ ಚಟ್ಟನಹಳ್ಳಿ ಗ್ರಾಮಗಳ ಸುತ್ತಮುತ್ತಲಿನ ನಿವಾಸಿಗಳು ಹೆಚ್ಚಿನ ಜಾಗ್ರತೆ ವಹಿಸುವಂತೆ ಅರಣ್ಯ ಇಲಾಖೆ ಮತ್ತು ಜಿಲ್ಲಾ ಆನೆ ಕಾರ್ಯಪಡೆ ಮನವಿ ಮಾಡಿದೆ.
ಗ್ರಾಮಸ್ಥರಿಗೆ ಮುನ್ನೆಚ್ಚರಿಕೆ:
ಕಾಡಾನೆಗಳು ಸಂಚರಿಸುವ ಪ್ರದೇಶಗಳಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಓಡಾಡಬೇಕು. ತೋಟ, ಗದ್ದೆ ಹಾಗೂ ಕಾಫಿ ತೋಟಗಳಲ್ಲಿ ಕೆಲಸ ಮಾಡುವವರು ವಿಶೇಷ ಮುನ್ನೆಚ್ಚರಿಕೆ ವಹಿಸಬೇಕು. ಕಾಡಾನೆಗಳು ಕಂಡುಬಂದಲ್ಲಿ ಅವುಗಳ ಸಮೀಪಕ್ಕೆ ಹೋಗದೆ ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು. ಅವುಗಳನ್ನು ಕೆಣಕುವುದು ಅಥವಾ ಓಡಿಸಲು ಪ್ರಯತ್ನಿಸುವುದು ಅಪಾಯಕಾರಿ.
ತಮ್ಮ ಗ್ರಾಮಗಳ ವ್ಯಾಪ್ತಿಯಲ್ಲಿ ಕಾಡಾನೆಗಳ ಸಂಚಾರ ಕಂಡುಬಂದಲ್ಲಿ ತಕ್ಷಣವೇ ಜಿಲ್ಲಾ ಆನೆ ಕಾರ್ಯಪಡೆ ಚಿಕ್ಕಮಗಳೂರು – 7204004261 ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಕೋರಲಾಗಿದೆ.
ಸಾರ್ವಜನಿಕರು ಅರಣ್ಯ ಇಲಾಖೆಯ ಸೂಚನೆಗಳನ್ನು ಪಾಲಿಸಿ ತಮ್ಮ ಹಾಗೂ ಇತರರ ಸುರಕ್ಷತೆಗೆ ಆದ್ಯತೆ ನೀಡಬೇಕೆಂದು ಮನವಿ ಮಾಡಲಾಗಿದೆ.
ಮಾಹಿತಿ: ಜಿಲ್ಲಾ ಆನೆ ಕಾರ್ಯಪಡೆ ಚಿಕ್ಕಮಗಳೂರು ಹಾಗೂ ಅರಣ್ಯ ಇಲಾಖೆ, ಮೂಡಿಗೆರೆ.
GNE UPDATES – GLOBAL NEWS OF ENLIGHTENMENT.
ಕಾರ್ ಬೈಲು ಭಾಗದಲ್ಲಿ ಕಾಡಾನೆಗಳ ಸಂಚಾರ: ಸುತ್ತಮುತ್ತಲಿನ ಗ್ರಾಮಸ್ಥರಿಗೆ ಅರಣ್ಯ ಇಲಾಖೆ ಎಚ್ಚರಿಕೆ!
GNE UPDATES
ಇತ್ತೀಚಿನ ಸುದ್ದಿ