ಮೂಡಿಗೆರೆ, ಸೆಪ್ಟೆಂಬರ್ 6: ಜಿ. ಹೊಸಹಳ್ಳಿ–ಕೆಮ್ಮಣ್ಣು ಗಂಡಿ ಭಾಗದಲ್ಲಿ ಒಂಟಿ ಕಾಡಾನೆಯೊಂದು ಸಂಚರಿಸುತ್ತಿರುವುದು ಕಂಡುಬಂದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಮೂಡಿಗೆರೆ ಅರಣ್ಯ ಇಲಾಖೆ ಸೂಚನೆ ನೀಡಿದೆ.

ಟಾಟಾ ಕಾಫಿ ಎಸ್ಟೇಟ್, ಜಿ. ಹೊಸಹಳ್ಳಿ, ಸಿಲ್ವರ್ ಖಾನ್ ಎಸ್ಟೇಟ್, ಪೋಡಿಯ ಕಾಲೋನಿ, ದಿಣ್ಣೆಕೆರೆ, ಕೆಮ್ಮಣ್ಣು ಗಂಡಿ, ಹಿರೇಶಿಗರ ಹಾಗೂ ತಮ್ಮಟೆ ಬೈಲು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಡಾನೆ ಸಂಚರಿಸುವ ಸಾಧ್ಯತೆ ಇರುವುದರಿಂದ, ಬೆಳಗಿನ ಸಮಯದಲ್ಲಿ ತೋಟ ಹಾಗೂ ಗದ್ದೆಗಳಿಗೆ ತೆರಳುವ ರೈತರು ಅತ್ಯಂತ ಜಾಗರೂಕತೆಯಿಂದ ಇರಬೇಕು ಎಂದು ಇಲಾಖೆ ಮನವಿ ಮಾಡಿದೆ.

ಈ ಭಾಗದ ಗ್ರಾಮಸ್ಥರು, ತೋಟದ ಕಾರ್ಮಿಕರು ಹಾಗೂ ವಾಹನ ಸವಾರರು ಕಾಡಾನೆ ಸಂಚಾರದ ಬಗ್ಗೆ ಎಚ್ಚರಿಕೆ ವಹಿಸಿ, ಯಾವುದೇ ಅಪಾಯಕಾರಿ ಪರಿಸ್ಥಿತಿ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅರಣ್ಯ ಇಲಾಖೆ ತಿಳಿಸಿದೆ.

ಕಾಡಾನೆ ಕಂಡುಬಂದಲ್ಲಿ ಸಾರ್ವಜನಿಕರು ಹತ್ತಿರ ಹೋಗದೆ, ಅದನ್ನು ಕೆಣಕದೆ, ತಕ್ಷಣ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಬೇಕು.

ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ:
📞 7204004261

ದಿನಾಂಕ: 06-09-2026
ಸಮಯ: ಬೆಳಗ್ಗೆ 7:28.