ಮೂಡಿಗೆರೆ, ನವೆಂಬರ್ 16: ಮೂಡಿಗೆರೆ ಅರಣ್ಯ ಇಲಾಖೆಯ ವತಿಯಿಂದ ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ ನೀಡಲಾಗಿದ್ದು, ನೆಲ್ಲೂರು ಗ್ರಾಮದ ಸುತ್ತಮುತ್ತ ಒಂಟಿ ಕಾಡಾನೆಯೊಂದು ಸಂಚರಿಸುತ್ತಿರುವ ಮಾಹಿತಿ ಲಭ್ಯವಾಗಿದೆ.
ಈ ಹಿನ್ನೆಲೆಯಲ್ಲಿ ಎರೆಹಳ್ಳಿ ಹಾಗೂ ಉಂಡೆದಾಸರಹಳ್ಳಿ ಗ್ರಾಮಗಳ ಸುತ್ತಮುತ್ತ ವಾಸಿಸುವ ಗ್ರಾಮಸ್ಥರು, ರೈತರು ಹಾಗೂ ತೋಟದ ಕಾರ್ಮಿಕರು ಹೆಚ್ಚಿನ ಜಾಗರೂಕತೆ ವಹಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
ಗ್ರಾಮಗಳ ಸುತ್ತಮುತ್ತ ಅಥವಾ ತಮ್ಮ ಹೊಲ-ತೋಟಗಳ ವ್ಯಾಪ್ತಿಯಲ್ಲಿ ಕಾಡಾನೆಗಳ ಸಂಚಾರ ಕಂಡುಬಂದಲ್ಲಿ ತಕ್ಷಣವೇ ಜಿಲ್ಲಾ ಆನೆ ಕಾರ್ಯಪಡೆಯ ದೂರವಾಣಿ ಸಂಖ್ಯೆ 7204004261 ಸಂಪರ್ಕಿಸಿ ಮಾಹಿತಿ ನೀಡುವಂತೆ ತಿಳಿಸಲಾಗಿದೆ.
ಅಲ್ಲದೆ, ಈ ಗ್ರಾಮಗಳ ಹೊಲ ಮತ್ತು ತೋಟಗಳಲ್ಲಿ ಕೆಲಸ ನಿರ್ವಹಿಸುವವರು ಅರಣ್ಯ ಇಲಾಖೆಯಿಂದ ಅಗತ್ಯ ಮಾಹಿತಿ ಹಾಗೂ ಮುನ್ನೆಚ್ಚರಿಕೆ ಪಡೆದುಕೊಂಡ ನಂತರವೇ ಕೆಲಸಕ್ಕೆ ತೆರಳುವಂತೆ ಸೂಚಿಸಲಾಗಿದೆ.
ಕಾಡಾನೆಗಳ ಸಂಚಾರದ ಹಿನ್ನೆಲೆಯಲ್ಲಿ ಸಾರ್ವಜನಿಕರು ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸದೆ, ತಮ್ಮ ಹಾಗೂ ಇತರರ ಸುರಕ್ಷತೆಗೆ ಆದ್ಯತೆ ನೀಡಬೇಕೆಂದು ಅರಣ್ಯ ಇಲಾಖೆ ಮನವಿ ಮಾಡಿದೆ.
ಮಾಹಿತಿ: ಅರಣ್ಯ ಇಲಾಖೆ, ಮೂಡಿಗೆರೆ
ದಿನಾಂಕ: 16-11-2026 | ಸಮಯ: ಬೆಳಿಗ್ಗೆ 6:58.
ನೆಲ್ಲೂರು ಗ್ರಾಮದ ಸುತ್ತಮುತ್ತ ಒಂಟಿ ಕಾಡಾನೆ ಸಂಚಾರ.. ಅರಣ್ಯ ಇಲಾಖೆಯಿಂದ ಎಚ್ಚರಿಕೆ!
GNE UPDATES
ಇತ್ತೀಚಿನ ಸುದ್ದಿ