ಮೂಡಿಗೆರೆ, ಸೆ.30: ಬಿದರಹಳ್ಳಿ ಗ್ರಾಮದ ಸುತ್ತಮುತ್ತಲಿನ ತೋಟಗಳಲ್ಲಿ ಒಂಟಿ ಕಾಡಾನೆಯೊಂದು ಸಂಚರಿಸುತ್ತಿರುವ ಮಾಹಿತಿ ಅರಣ್ಯ ಇಲಾಖೆಗೆ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಬಿದರಹಳ್ಳಿ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ವಾಹನ ಸವಾರರು ರಾತ್ರಿ ವೇಳೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಮೂಡಿಗೆರೆ ಅರಣ್ಯ ಇಲಾಖೆ ಸೂಚಿಸಿದೆ.
ಕೆಂಜಿಗೆ, ಬಾಳೆಹಳ್ಳಿ, ಬಿದರಹಳ್ಳಿ, ಬಿದರಹಳ್ಳಿ ಕಾಲೋನಿ ಹಾಗೂ ಹಾರ್ಗೋಡು ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳು ರಾತ್ರಿ ಸಮಯದಲ್ಲಿ ಸಂಚರಿಸುವಾಗ ಮುನ್ನೆಚ್ಚರಿಕೆ ವಹಿಸಬೇಕು. ಕಾಡಾನೆ ಸಂಚಾರದ ಹಿನ್ನೆಲೆಯಲ್ಲಿ ರಾತ್ರಿ ವೇಳೆ ಅನಗತ್ಯವಾಗಿ ತೋಟಗಳಿಗೆ ತೆರಳದಂತೆ ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಇಲಾಖೆ ಮನವಿ ಮಾಡಿದೆ.
ಅರಣ್ಯ ಇಲಾಖೆಯ ಮಾಹಿತಿ ಪಡೆದು ಮುಂಜಾನೆ ಸಮಯದಲ್ಲಿ ಮಾತ್ರ ತೋಟದ ಕೆಲಸಗಳನ್ನು ನಿರ್ವಹಿಸುವಂತೆ ಗ್ರಾಮಸ್ಥರು ಹಾಗೂ ಕಾರ್ಮಿಕರಿಗೆ ಸೂಚಿಸಲಾಗಿದೆ.
ಕಾಡಾನೆ ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ: 7204004261 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಅರಣ್ಯ ಇಲಾಖೆ ತಿಳಿಸಿದೆ.
ದಿನಾಂಕ: 30-09-2026 | ಸಮಯ: ರಾತ್ರಿ 9:41.
ಬಿದರಹಳ್ಳಿ ಸುತ್ತಮುತ್ತ ಒಂಟಿ ಕಾಡಾನೆ ಸಂಚಾರ: ಗ್ರಾಮಸ್ಥರಿಗೆ ಎಚ್ಚರಿಕೆ!
GNE UPDATES
ಇತ್ತೀಚಿನ ಸುದ್ದಿ