ಚಿಕ್ಕಮಗಳೂರು, ನವೆಂಬರ್ 20: ಭುಜನಕಟ್ಟೆ–ಮತ್ತಾವರ ಮೀಸಲು ಅರಣ್ಯದ ಸುತ್ತಮುತ್ತ ಒಂಟಿ ಕಾಡಾನೆಯೊಂದು ಸಂಚರಿಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಅರಣ್ಯ ಪ್ರದೇಶದ ಸುತ್ತಮುತ್ತಲಿನ ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾ ಆನೆ ಕಾರ್ಯಪಡೆ ಚಿಕ್ಕಮಗಳೂರು ಪ್ರಕಟಣೆ ಮೂಲಕ ಮನವಿ ಮಾಡಿದೆ.

ಮತ್ತಾವರ, ಹುಕ್ಕುಂದ, ನೆಲ್ಲೂರು, ದಂಬದಹಳ್ಳಿ ಹಾಗೂ ಬಾಚಿಗನಹಳ್ಳಿ ಗ್ರಾಮಗಳ ಸುತ್ತಮುತ್ತ ರಾತ್ರಿ ವೇಳೆ ಕಾಡಾನೆ ಸಂಚರಿಸುವ ಸಾಧ್ಯತೆ ಇರುವುದರಿಂದ ಈ ಭಾಗದ ಸಾರ್ವಜನಿಕರು ಹೆಚ್ಚಿನ ಜಾಗರೂಕತೆ ವಹಿಸಬೇಕು ಎಂದು ತಿಳಿಸಲಾಗಿದೆ.

ಈ ಗ್ರಾಮಗಳ ಸುತ್ತಮುತ್ತ ಸಂಚರಿಸುವ ಸಾರ್ವಜನಿಕರು ಹಾಗೂ ವಾಹನ ಸವಾರರು ರಾತ್ರಿ ಸಮಯದಲ್ಲಿ ವಿಶೇಷ ಎಚ್ಚರಿಕೆ ವಹಿಸಬೇಕು. ಅನಗತ್ಯವಾಗಿ ಅರಣ್ಯ ಪ್ರದೇಶ ಹಾಗೂ ತೋಟಗಳ ಕಡೆಗೆ ತೆರಳುವುದನ್ನು ತಪ್ಪಿಸಬೇಕು ಎಂದು ಸೂಚಿಸಲಾಗಿದೆ.

ತಮ್ಮ ಗ್ರಾಮಗಳ ಸುತ್ತಮುತ್ತ ಕಾಡಾನೆ ಕಾಣಿಸಿಕೊಂಡಲ್ಲಿ ತಕ್ಷಣ ಜಿಲ್ಲಾ ಆನೆ ಕಾರ್ಯಪಡೆಯ ಸಹಾಯವಾಣಿ 7204004261 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.

ಪ್ರಕಟಣೆ ವಿವರ: 20-11-2026, ಸಂಜೆ 6:35

– ಜಿಲ್ಲಾ ಆನೆ ಕಾರ್ಯಪಡೆ, ಚಿಕ್ಕಮಗಳೂರು.