ಚಿಕ್ಕಮಗಳೂರು, ನವೆಂಬರ್ 22: ಮತ್ತಾವರ ಅರಣ್ಯ ಪ್ರದೇಶದಲ್ಲಿ ಒಂಟಿ ಕಾಡಾನೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮತ್ತಾವರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾ ಆನೆ ಕಾರ್ಯಪಡೆ ಚಿಕ್ಕಮಗಳೂರು ಸಾರ್ವಜನಿಕರಿಗೆ ಸೂಚನೆ ನೀಡಿದೆ.
ಮತ್ತಾವರ ಅರಣ್ಯ ಪ್ರದೇಶದಲ್ಲಿ ಒಂಟಿ ಕಾಡಾನೆ ಕಾಣಿಸಿಕೊಂಡಿದ್ದು, ಮತ್ತಾವರ, ಬಾಚಿಗನಹಳ್ಳಿ, ಮಾರಿಕಟ್ಟೆ, ಆಲದಗುಡ್ಡೆ, ದಂಬದಹಳ್ಳಿ, ಹುಕ್ಕುಂದ, ನೆಲ್ಲೂರು ಹಾಗೂ ಇಂದಾವರ ಗ್ರಾಮಗಳ ಸುತ್ತಮುತ್ತ ಕಾಡಾನೆ ಸಂಚರಿಸುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಅನಗತ್ಯವಾಗಿ ಅರಣ್ಯ ಪ್ರದೇಶಗಳತ್ತ ತೆರಳದೆ ಎಚ್ಚರಿಕೆ ವಹಿಸಬೇಕು. ವಿಶೇಷವಾಗಿ ಈ ಗ್ರಾಮಗಳ ಸುತ್ತಮುತ್ತಲಿನ ಕಾಫಿ ತೋಟಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರು ಹಾಗೂ ತೋಟದ ಮಾಲೀಕರು ಹೆಚ್ಚಿನ ಜಾಗರೂಕತೆ ವಹಿಸಿ ಕೆಲಸ ಮಾಡಬೇಕು ಎಂದು ಜಿಲ್ಲಾ ಆನೆ ಕಾರ್ಯಪಡೆ ಮನವಿ ಮಾಡಿದೆ.
ಗ್ರಾಮಗಳ ಸುತ್ತಮುತ್ತ ಕಾಡಾನೆ ಸಂಚಾರ ಕಂಡುಬಂದಲ್ಲಿ ತಕ್ಷಣ ಜಿಲ್ಲಾ ಆನೆ ಕಾರ್ಯಪಡೆಯ 7204004261 ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಕೋರಲಾಗಿದೆ.
ಮಾಹಿತಿ ಪ್ರಕಟಣೆ: ಜಿಲ್ಲಾ ಆನೆ ಕಾರ್ಯಪಡೆ, ಚಿಕ್ಕಮಗಳೂರು
– ದಿನಾಂಕ: 22-11-2026
– ಸಮಯ: ಬೆಳಿಗ್ಗೆ 08:12.
ಮತ್ತಾವರ ಅರಣ್ಯ ಪ್ರದೇಶದಲ್ಲಿ ಒಂಟಿ ಕಾಡಾನೆ ಪ್ರತ್ಯಕ್ಷ: ಸುತ್ತಮುತ್ತಲಿನ ಗ್ರಾಮಸ್ಥರಿಗೆ ಎಚ್ಚರಿಕೆ!
GNE UPDATES
ಇತ್ತೀಚಿನ ಸುದ್ದಿ