ಮೂಡಿಗೆರೆ: ಮಹಿಳೆಯರು ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳನ್ನು ತೀವ್ರವಾಗಿ ಖಂಡಿಸಿ, “ಅತ್ಯಾಚಾರ ಮುಕ್ತ ಭಾರತಕ್ಕಾಗಿ ಆಗ್ರಹ” ಎಂಬ ಘೋಷಣೆಯೊಂದಿಗೆ ಪೀಸ್ & ಅವೆರ್ನೆಸ್ ಟ್ರಸ್ಟ್ ವತಿಯಿಂದ ಪ್ರತಿಭಟನೆ ಆಯೋಜಿಸಲಾಗಿದೆ.
ಸೆಪ್ಟೆಂಬರ್ 11, 2026ರ ಶುಕ್ರವಾರ ಸಂಜೆ 6:30ಕ್ಕೆ ಮೂಡಿಗೆರೆಯ ಲಯನ್ಸ್ ವೃತ್ತದಲ್ಲಿ ಪ್ರತಿಭಟನೆ ನಡೆಯಲಿದೆ.
ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತ ವಾತಾವರಣ ನಿರ್ಮಿಸುವುದು, ಲೈಂಗಿಕ ದೌರ್ಜನ್ಯಗಳಿಗೆ ಕಡಿವಾಣ ಹಾಕುವುದು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.
ಸಾಮಾಜಿಕ ನ್ಯಾಯ, ಮಹಿಳಾ ಮತ್ತು ಮಕ್ಕಳ ಸುರಕ್ಷತೆ ಹಾಗೂ ಅತ್ಯಾಚಾರ ಮುಕ್ತ ಭಾರತ ನಿರ್ಮಾಣಕ್ಕಾಗಿ ನಡೆಯಲಿರುವ ಈ ಪ್ರತಿಭಟನೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಂಬಲಿಸುವಂತೆ ಪೀಸ್ & ಅವೆರ್ನೆಸ್ ಟ್ರಸ್ಟ್ ಮನವಿ ಮಾಡಿದೆ.