ಮೂಡಿಗೆರೆ, ನವೆಂಬರ್ 28:
ಮೂಡಿಗೆರೆ ತಾಲ್ಲೂಕಿನ ಮಾಕೋನಹಳ್ಳಿ–ಹೊರಟ್ಟಿ ಗ್ರಾಮದ ದೇವೇಗೌಡ್ರು ಅವರ ತೋಟದ ಸುತ್ತಮುತ್ತ ಕಾಡಾನೆಗಳ ಗುಂಪು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ, ಜಿಲ್ಲಾ ಆನೆ ಕಾರ್ಯಪಡೆ ಚಿಕ್ಕಮಗಳೂರು ಹಾಗೂ ಅರಣ್ಯ ಇಲಾಖೆ ಮೂಡಿಗೆರೆ ವತಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.
ಬಾರದಹಳ್ಳಿ, ಮಾಕೋನಹಳ್ಳಿ, ಹೊರಟ್ಟಿ, ಚಂದ್ರಪುರ ಹಾಗೂ ಘಟ್ಟದಹಳ್ಳಿ ಗ್ರಾಮಗಳ ಸುತ್ತಮುತ್ತ ಕಾಡಾನೆಗಳ ಸಂಚಾರವಿರುವುದರಿಂದ ಈ ಭಾಗದ ಗ್ರಾಮಸ್ಥರು, ಸಾರ್ವಜನಿಕರು ಹಾಗೂ ವಾಹನ ಸವಾರರು ಅತ್ಯಂತ ಜಾಗರೂಕತೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.
ಕಾಫಿ ತೋಟಗಳಲ್ಲಿ ಕೆಲಸ ನಿರ್ವಹಿಸದಂತೆ ಮನವಿ
ಕಾಡಾನೆಗಳ ಚಲನವಲನ ಇರುವ ಈ ಭಾಗದ ಕಾಫಿ ತೋಟಗಳಲ್ಲಿ ಕಾರ್ಮಿಕರು ಹಾಗೂ ಸಾರ್ವಜನಿಕರು ಯಾವುದೇ ಕೆಲಸ ಕಾರ್ಯಗಳನ್ನು ನಿರ್ವಹಿಸದಂತೆ ಅರಣ್ಯ ಇಲಾಖೆ ಮನವಿ ಮಾಡಿದೆ. ಕಾಡಾನೆಗಳು ಎದುರಾದ ಸಂದರ್ಭದಲ್ಲಿ ಅವುಗಳನ್ನು ಕೆಣಕುವುದು, ಹತ್ತಿರ ಹೋಗುವುದು ಅಥವಾ ಅವುಗಳ ಚಲನವಲನಕ್ಕೆ ಅಡ್ಡಿಪಡಿಸುವುದನ್ನು ಮಾಡಬಾರದು.
ತಮ್ಮ ಗ್ರಾಮಗಳ ಸುತ್ತಮುತ್ತ ಕಾಡಾನೆಗಳ ಸಂಚಾರ ಕಂಡುಬಂದಲ್ಲಿ ತಕ್ಷಣ ಜಿಲ್ಲಾ ಆನೆ ಕಾರ್ಯಪಡೆ ಚಿಕ್ಕಮಗಳೂರು ತಂಡಕ್ಕೆ ಮಾಹಿತಿ ನೀಡುವಂತೆ ಕೋರಲಾಗಿದೆ.
ತುರ್ತು ಸಂಪರ್ಕ ಸಂಖ್ಯೆ: 7204004261
ದಿನಾಂಕ: 28-11-2026
ಸಮಯ: ಬೆಳಿಗ್ಗೆ 06:35
ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಅರಣ್ಯ ಇಲಾಖೆ ನೀಡಿರುವ ಎಚ್ಚರಿಕೆಯನ್ನು ಪಾಲಿಸಿ, ಎಚ್ಚರಿಕೆಯಿಂದ ಇರಲು ಕೋರಲಾಗಿದೆ.
ಮಾಕೋನಹಳ್ಳಿ–ಹೊರಟ್ಟಿ ಭಾಗದಲ್ಲಿ ಕಾಡಾನೆಗಳ ಗುಂಪು ಸಂಚಾರ
ಗ್ರಾಮಸ್ಥರು ಹಾಗೂ ವಾಹನ ಸವಾರರಿಗೆ ಅರಣ್ಯ ಇಲಾಖೆ ಎಚ್ಚರಿಕೆ!
ಗ್ರಾಮಸ್ಥರು ಹಾಗೂ ವಾಹನ ಸವಾರರಿಗೆ ಅರಣ್ಯ ಇಲಾಖೆ ಎಚ್ಚರಿಕೆ!
GNE UPDATES
ಇತ್ತೀಚಿನ ಸುದ್ದಿ