ಮೂಡಿಗೆರೆ, ನವೆಂಬರ್ 22: ಮೂಡಿಗೆರೆ ತಾಲ್ಲೂಕಿನ ಮಾಕೋನಹಳ್ಳಿ ಹೊರಟ್ಟಿ ಭಾಗದಲ್ಲಿ ಕಾಡಾನೆಗಳ ಗುಂಪು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಆನೆ ಕಾರ್ಯಪಡೆ ಚಿಕ್ಕಮಗಳೂರು ಹಾಗೂ ಅರಣ್ಯ ಇಲಾಖೆ ಮೂಡಿಗೆರೆ ವತಿಯಿಂದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ತುರ್ತು ಎಚ್ಚರಿಕೆ ನೀಡಲಾಗಿದೆ.
ಮಾಕೋನಹಳ್ಳಿ, ನಂದೀಪುರ, ಗೌರಿಕೆರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ಕಾಡಾನೆಗಳ ಗುಂಪು ಸಂಚರಿಸುವ ಸಾಧ್ಯತೆ ಇರುವುದರಿಂದ ಸ್ಥಳೀಯ ನಿವಾಸಿಗಳು, ರೈತರು, ತೋಟದ ಮಾಲೀಕರು ಹಾಗೂ ಕೂಲಿ ಕಾರ್ಮಿಕರು ಹೆಚ್ಚಿನ ಜಾಗ್ರತೆ ವಹಿಸುವಂತೆ ಇಲಾಖೆ ಮನವಿ ಮಾಡಿದೆ.
ಕಾಡಾನೆಗಳು ಸಂಚರಿಸುವ ಪ್ರದೇಶಗಳಲ್ಲಿ ಪಟಾಕಿ ಸಿಡಿಸುವುದು, ಕಲ್ಲು ಎಸೆಯುವುದು ಅಥವಾ ಬಲವಾದ ಕೋಲುಗಳಿಂದ ಆನೆಗಳನ್ನು ಹೊಡೆಯಲು ಪ್ರಯತ್ನಿಸುವುದು ಮಾಡಬಾರದು. ಇಂತಹ ಕೃತ್ಯಗಳಿಂದ ಆನೆಗಳು ಗಾಬರಿಗೊಂಡು ಜನರ ಮೇಲೆ ದಾಳಿ ಮಾಡುವ ಅಥವಾ ಅಟ್ಟಿಸಿಕೊಂಡು ಬರುವ ಅಪಾಯವಿದೆ ಎಂದು ಎಚ್ಚರಿಸಲಾಗಿದೆ.
ಅಲ್ಲದೆ, ಈ ಗ್ರಾಮಗಳ ಸುತ್ತಮುತ್ತ ಸಂಚರಿಸುವ ವಾಹನ ಸವಾರರು ಅತ್ಯಂತ ಜಾಗರೂಕತೆಯಿಂದ ವಾಹನ ಚಲಾಯಿಸಬೇಕು. ಕಾಡಾನೆಗಳು ಕಂಡುಬಂದಲ್ಲಿ ಅವುಗಳ ಸಮೀಪ ಹೋಗದೆ ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು ಎಂದು ಸೂಚಿಸಲಾಗಿದೆ.
ಕಾಡಾನೆಗಳ ಸಂಚಾರ ಕಂಡುಬಂದಲ್ಲಿ ತಕ್ಷಣ ಮಾಹಿತಿ ನೀಡಿ:
ಜಿಲ್ಲಾ ಆನೆ ಕಾರ್ಯಪಡೆ ಚಿಕ್ಕಮಗಳೂರು
ಸಹಾಯವಾಣಿ: 7204004261
ಕಾಡಾನೆಗಳ ಚಲನವಲನದ ಬಗ್ಗೆ ಮಾಹಿತಿ ದೊರೆತ ತಕ್ಷಣ ಮೇಲಿನ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಿಳಿಸುವಂತೆ ಅರಣ್ಯ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಮಾಹಿತಿ ಪ್ರಕಟಿಸಿದವರು: ಜಿಲ್ಲಾ ಆನೆ ಕಾರ್ಯಪಡೆ, ಚಿಕ್ಕಮಗಳೂರು ಹಾಗೂ ಅರಣ್ಯ ಇಲಾಖೆ, ಮೂಡಿಗೆರೆ.
ದಿನಾಂಕ: 22-11-2026 | ಸಮಯ: ಸಂಜೆ 4:52 ಗಂಟೆ.
ಮಾಕೋನಹಳ್ಳಿ–ಹೊರಟ್ಟಿ ಭಾಗದಲ್ಲಿ ಕಾಡಾನೆಗಳ ಗುಂಪು ಪ್ರತ್ಯಕ್ಷ: ಸುತ್ತಮುತ್ತಲಿನ ಗ್ರಾಮಸ್ಥರಿಗೆ ಅರಣ್ಯ ಇಲಾಖೆ ಎಚ್ಚರಿಕೆ!
GNE UPDATES
ಇತ್ತೀಚಿನ ಸುದ್ದಿ