ಮೂಡಿಗೆರೆ, ಆಗಸ್ಟ್ 16: ಮೂಡಿಗೆರೆ ಅರಣ್ಯ ಇಲಾಖೆ ವ್ಯಾಪ್ತಿಯ ಸರ್ವೇ ನಂ. 73ರ ಉದ್ದಿ ಕುಂಬ್ರಿ ಕಾಡಿನಲ್ಲಿ ಎರಡು ಕಾಡಾನೆಗಳು ಕಂಡುಬಂದಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚರಿಸುತ್ತಿರುವುದಾಗಿ ಅರಣ್ಯ ಇಲಾಖೆ ತಿಳಿಸಿದೆ.
ಜಿ. ಹೊಸಹಳ್ಳಿ ಟಾಟಾ ಕಾಫಿ ಎಸ್ಟೇಟ್, ಜಿ. ಹೊಸಹಳ್ಳಿ ಗ್ರಾಮ, ಪೋಡಿಯ ಕಾಲೋನಿ ಹಾಗೂ ಹೊಸಪುರ ಗ್ರಾಮದ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ವಾಹನ ಸವಾರರು ಹೆಚ್ಚಿನ ಎಚ್ಚರಿಕೆಯಿಂದ ಸಂಚರಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
ಕಾಡಾನೆಗಳು ಕಂಡುಬಂದಲ್ಲಿ ಸಾರ್ವಜನಿಕರು ಅವುಗಳನ್ನು ಹಿಂಬಾಲಿಸದೆ ಅಥವಾ ಹತ್ತಿರ ಹೋಗದೆ, ತಕ್ಷಣ ಜಿಲ್ಲಾ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿಗೆ 7204004261 ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಇಲಾಖೆ ಸೂಚಿಸಿದೆ.
ದಿನಾಂಕ: 16-08-2026
ಸಮಯ: ಮಧ್ಯಾಹ್ನ 2:40..
ಮೂಡಿಗೆರೆ: ಎರಡು ಕಾಡಾನೆಗಳ ಸಂಚಾರ — ಸಾರ್ವಜನಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ
GNE UPDATES
ಇತ್ತೀಚಿನ ಸುದ್ದಿ