ಮೂಡಿಗೆರೆ, ಆಗಸ್ಟ್ 08: ಮೂಡಿಗೆರೆ ಅರಣ್ಯ ಇಲಾಖೆ ವ್ಯಾಪ್ತಿಯ ಭದ್ರಾಪುರ ಎಸ್ಟೇಟ್ನಲ್ಲಿ ಎರಡು ಕಾಡಾನೆಗಳು ಕಂಡುಬಂದಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚರಿಸುತ್ತಿವೆ ಎಂದು ಅರಣ್ಯ ಇಲಾಖೆ ಪ್ರಕಟಣೆ ತಿಳಿಸಿದೆ.
ಕಾಡಾನೆಗಳ ಸಂಚಾರದ ಹಿನ್ನೆಲೆಯಲ್ಲಿ ದುಂಡುಗ, ಹಳಸೆ, ಜಾಗರಖಾನ್, ಜಾಗರಮನೆ, ಮಣ್ಣಿಕೆರೆ, ಶುಭನಗರ ಹಾಗೂ ಚಂದ್ರಪುರ ಗ್ರಾಮಗಳ ಸುತ್ತಮುತ್ತಲಿನ ಗ್ರಾಮಸ್ಥರು, ಕಾರ್ಮಿಕರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
ಕಾಡಾನೆಗಳು ಕಂಡುಬಂದಲ್ಲಿ ಅವುಗಳ ಸಮೀಪ ಹೋಗದೆ, ಅವುಗಳನ್ನು ಕೆಣಕದೆ ತಕ್ಷಣ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.
📞 ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ: 7204004261
ದಿನಾಂಕ: 08-08-2026
ಸಮಯ: ರಾತ್ರಿ 9:30
— ಅರಣ್ಯ ಇಲಾಖೆ, ಮೂಡಿಗೆರೆ.
ಮೂಡಿಗೆರೆ : ಕಾಡನೆಗಳ ಸಂಚಾರ ಗ್ರಾಮಸ್ಥರು ಎಚ್ಚರದಿಂದಿರಿ..
GNE UPDATES
ಇತ್ತೀಚಿನ ಸುದ್ದಿ