ದಿನಾಂಕ: 03 ಆಗಸ್ಟ್ 2026
ಸಮಯ: ಬೆಳಿಗ್ಗೆ 8:30

ಮೂಡಿಗೆರೆ ತಾಲ್ಲೂಕಿನಲ್ಲಿ ಕಾಡಾನೆಗಳ ಸಂಚಾರ – ಸಾರ್ವಜನಿಕರಿಗೆ ಅರಣ್ಯ ಇಲಾಖೆಯ ಎಚ್ಚರಿಕೆ

ಮೂಡಿಗೆರೆ ಅರಣ್ಯ ಇಲಾಖೆಯ ಮಾಹಿತಿಯಂತೆ, ಮೂರು ಕಾಡಾನೆಗಳು ಜಾಗರ ಖಾನ್ ಪ್ರದೇಶದಲ್ಲಿ ಕಂಡುಬಂದಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚರಿಸುವ ಸಾಧ್ಯತೆ ಇದೆ.

ಆದ್ದರಿಂದ ದುಂಡುಗ, ಹಳಸೆ, ಜಾಗರಖಾನ್, ಜಾಗರಮನೆ, ಮಣ್ಣಿಕೆರೆ, ಶುಭನಗರ ಹಾಗೂ ಚಂದ್ರಪುರ ಗ್ರಾಮದ ನಿವಾಸಿಗಳು, ತೋಟದ ಕಾರ್ಮಿಕರು ಹಾಗೂ ವಾಹನ ಸವಾರರು ಅಗತ್ಯ ಮುನ್ನೆಚ್ಚರಿಕೆ ವಹಿಸಿ ಎಚ್ಚರಿಕೆಯಿಂದ ಸಂಚರಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.

ಯಾರಾದರೂ ಕಾಡಾನೆಗಳು ಕಂಡುಬಂದಲ್ಲಿ ಅಥವಾ ಅವುಗಳ ಚಲನವಲನದ ಬಗ್ಗೆ ಮಾಹಿತಿ ದೊರೆತಲ್ಲಿ, ತಕ್ಷಣವೇ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 7204004261 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಕೋರಲಾಗಿದೆ.

– ಅರಣ್ಯ ಇಲಾಖೆ, ಮೂಡಿಗೆರೆ