ಮೂಡಿಗೆರೆ, ಆಗಸ್ಟ್ 20: ಮೂಡಿಗೆರೆ ಅರಣ್ಯ ಇಲಾಖೆ ವ್ಯಾಪ್ತಿಯ ಕಾರ್ ಬೈಲು ಗ್ರಾಮದ ವಿರೇಶ್ ಗೌಡ ಅವರ ತೋಟದಲ್ಲಿ ಮೂರು ಕಾಡಾನೆಗಳು ಕಂಡುಬಂದಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚರಿಸುತ್ತಿವೆ.

ಈ ಹಿನ್ನೆಲೆಯಲ್ಲಿ ಕಾರ್ ಬೈಲು, ತುದಿಯಲ, ಬಾರದಹಳ್ಳಿ ಹಾಗೂ ಚಂದ್ರಪುರ ಗ್ರಾಮಗಳ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.

ಕಾಡಾನೆಗಳು ಸಂಚರಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ರಾತ್ರಿ ಹಾಗೂ ಮುಂಜಾನೆ ಸಮಯದಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಬೇಕು. ಕಾಡಾನೆಗಳು ಕಂಡುಬಂದಲ್ಲಿ ಅವುಗಳನ್ನು ಹತ್ತಿರದಿಂದ ವೀಕ್ಷಿಸಲು ಅಥವಾ ಹಿಂಬಾಲಿಸಲು ಪ್ರಯತ್ನಿಸದೆ, ತಕ್ಷಣವೇ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 7204004261ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಅರಣ್ಯ ಇಲಾಖೆ ತಿಳಿಸಿದೆ.

ದಿನಾಂಕ: 20-08-2026
ಸಮಯ: ಸಂಜೆ 6.00 ಗಂಟೆ

— ಅರಣ್ಯ ಇಲಾಖೆ, ಮೂಡಿಗೆರೆ.