ಮೂಡಿಗೆರೆ, ಆಗಸ್ಟ್ 29: ಮೂಡಿಗೆರೆ ಅರಣ್ಯ ಇಲಾಖೆ ವ್ಯಾಪ್ತಿಯ ಕಾನನಹಳ್ಳಿ ಕಾಡಿನಲ್ಲಿ ಕಾಡಾನೆಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ, ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ವಾಹನ ಸವಾರರು ರಾತ್ರಿ ವೇಳೆ ಅತ್ಯಂತ ಎಚ್ಚರಿಕೆಯಿಂದ ಸಂಚರಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ.

ಕಾಡಾನೆಗಳ ಸಂಚಾರ ಕಂಡುಬಂದಿರುವ ಹಿನ್ನೆಲೆಯಲ್ಲಿ ಟಾಟಾ ಕಾಫಿ ಎಸ್ಟೇಟ್, ಜಿ. ಹೊಸಹಳ್ಳಿ, ಸಿಲ್ವರ್ ಖಾನ್ ಎಸ್ಟೇಟ್, ಪೋಡಿಯ ಕಾಲೋನಿ, ದಿಣ್ಣೆಕೆರೆ, ಕೆಮ್ಮಣ್ಣುಗಂಡಿ ಹಾಗೂ ಹೊಸಪುರ ಗ್ರಾಮಗಳ ಸುತ್ತಮುತ್ತಲಿನ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.

ವಿಶೇಷವಾಗಿ ರಾತ್ರಿ ವೇಳೆ ಅನಗತ್ಯವಾಗಿ ಸಂಚರಿಸದೆ, ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಅರಣ್ಯ ಇಲಾಖೆ ತಿಳಿಸಿದೆ.

ಕಾಡಾನೆಗಳು ಕಂಡುಬಂದಲ್ಲಿ ಸಾರ್ವಜನಿಕರು ಅವುಗಳ ಸಮೀಪ ತೆರಳದೆ, ತಕ್ಷಣವೇ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 7204004261ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಇಲಾಖೆ ಮನವಿ ಮಾಡಿದೆ.

ದಿನಾಂಕ: 29-08-2026
ಸಮಯ: ಸಂಜೆ 6:15.