ದಿನಾಂಕ: 05 ಆಗಸ್ಟ್ 2026
ಸಮಯ: ಸಂಜೆ 6:40

ಶುಭನಗರ ಭಾಗದಲ್ಲಿ ಕಾಡಾನೆಗಳ ಸಂಚಾರ – ಸಾರ್ವಜನಿಕರಿಗೆ ಅರಣ್ಯ ಇಲಾಖೆಯ ತುರ್ತು ಎಚ್ಚರಿಕೆ

ಮೂಡಿಗೆರೆ ಅರಣ್ಯ ಇಲಾಖೆಯ ಪ್ರಕಟಣೆಯ ಪ್ರಕಾರ, ಶುಭನಗರ ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳು ಸಂಚರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.

ವಿಶೇಷವಾಗಿ ಶುಭನಗರ, ಮಣ್ಣಿಕೆರೆ, ಭದ್ರಾಪುರ ಎಸ್ಟೇಟ್, ಗಾಡಿಚೌಕ, ಕೆಳ ಜನ್ನಾಪುರ, ಮರೆಬೈಲು, ಚಂದ್ರಪುರ ಹಾಗೂ ಕೇಳಚಂದ್ರ ಕಮ್ಮರಗೋಡು ಎಸ್ಟೇಟ್ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ಮತ್ತು ವಾಹನ ಸವಾರರು ಹೆಚ್ಚಿನ ಎಚ್ಚರಿಕೆಯಿಂದ ಇರಬೇಕು.

ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಗೆ ಸಂಚರಿಸುವುದನ್ನು ತಪ್ಪಿಸಬೇಕು. ಅಗತ್ಯವಿದ್ದಲ್ಲಿ ಮಾತ್ರ ಹೊರಗೆ ತೆರಳಬೇಕು ಹಾಗೂ ರಾತ್ರಿ ವೇಳೆಯಲ್ಲಿ ಒಬ್ಬರೇ ಓಡಾಡುವುದನ್ನು ಸಂಪೂರ್ಣವಾಗಿ ತಪ್ಪಿಸುವಂತೆ ಇಲಾಖೆ ಸೂಚಿಸಿದೆ.

ಯಾವುದೇ ಸ್ಥಳದಲ್ಲಿ ಕಾಡಾನೆಗಳು ಕಂಡುಬಂದಲ್ಲಿ ತಕ್ಷಣವೇ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ 7204004261ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.

— ಅರಣ್ಯ ಇಲಾಖೆ, ಮೂಡಿಗೆರೆ.