ಮೂಡಿಗೆರೆ: ಕಾನಹಳ್ಳಿ ಕಾಡಿನ ಸುತ್ತಮುತ್ತ ಕಾಡಾನೆಗಳನ್ನು ಸೆರೆಹಿಡಿಯುವ ಕಾರ್ಯಾಚರಣೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾಡಾನೆಗಳು ಸಮೀಪದ ಗ್ರಾಮಗಳ ಕಡೆಗೆ ಸಂಚರಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ಅರಣ್ಯ ಇಲಾಖೆ ಮೂಡಿಗೆರೆ ತಿಳಿಸಿದೆ.
ಜಿ. ಹೊಸಹಳ್ಳಿ ಟಾಟಾ ಕಾಫಿ ಎಸ್ಟೇಟ್, ಸಿಲ್ವರ್ ಖಾನ್ ಎಸ್ಟೇಟ್, ಜಿ. ಹೊಸಹಳ್ಳಿ ಗ್ರಾಮ, ಹಿರಿಶಿಗರ, ಹೊಸಪುರ ಹಾಗೂ ಪೋಡಿಯ ಕಾಲೋನಿ ಭಾಗಗಳಲ್ಲಿ ಕಾಡಾನೆಗಳ ಸಂಚಾರದ ಸಾಧ್ಯತೆ ಇರುವುದರಿಂದ, ರೈತರು ಹಾಗೂ ಕಾರ್ಮಿಕರು ಯಾವುದೇ ಕಾರಣಕ್ಕೂ ತೋಟ-ಗದ್ದೆಗಳಲ್ಲಿ ಕೆಲಸಕ್ಕೆ ತೆರಳದಂತೆ ಅರಣ್ಯ ಇಲಾಖೆ ಸೂಚಿಸಿದೆ.
ಅಲ್ಲದೆ, ಈ ಗ್ರಾಮಗಳ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ವಾಹನ ಸವಾರರು ಅತ್ಯಂತ ಎಚ್ಚರಿಕೆಯಿಂದ ಸಂಚರಿಸುವಂತೆ ಮನವಿ ಮಾಡಲಾಗಿದೆ. ಕಾಡಾನೆ ಕಂಡುಬಂದಲ್ಲಿ ಅದರ ಸಮೀಪಕ್ಕೆ ತೆರಳದೆ, ತಕ್ಷಣವೇ ಆನೆ ಕಾರ್ಯಪಡೆಯ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ.
ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ:
📞 7204004261
ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಅರಣ್ಯ ಇಲಾಖೆಯ ಸೂಚನೆಗಳನ್ನು ಪಾಲಿಸಿ, ಕಾಡಾನೆಗಳ ಚಲನವಲನದ ಬಗ್ಗೆ ಎಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
ಮೂಡಿಗೆರೆ : ಕಾಡಾನೆ ಸೆರೆ ಕಾರ್ಯಾಚರಣೆ: ಸಾರ್ವಜನಿಕರಿಗೆ ಎಚ್ಚರಿಕೆ!
GNE UPDATES
ಇತ್ತೀಚಿನ ಸುದ್ದಿ