ಮೂಡಿಗೆರೆ, ಆಗಸ್ಟ್ 12, 2026: ಕಾನಹಳ್ಳಿ ಕಾಡು ಪ್ರದೇಶದಲ್ಲಿ ಒಂಟಿ ಕಾಡಾನೆಯೊಂದು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ, ಅರಣ್ಯ ಇಲಾಖೆ ಮೂಡಿಗೆರೆ ವತಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.
ಈ ಕಾಡಾನೆ ರಾತ್ರಿ ಸಮಯದಲ್ಲಿ ಜಿ. ಹೊಸಹಳ್ಳಿ ಟಾಟಾ ಕಾಫಿ ಎಸ್ಟೇಟ್, ಜಿ. ಹೊಸಹಳ್ಳಿ ಗ್ರಾಮ, ಪೋಡಿಯ ಕಾಲೋನಿ ಹಾಗೂ ಸಿಲ್ವರ್ ಖಾನ್ ಎಸ್ಟೇಟ್ ಸುತ್ತಮುತ್ತಲಿನ ಪ್ರದೇಶಗಳಿಗೆ ಆಗಮಿಸುವ ಸಾಧ್ಯತೆ ಇರುವುದರಿಂದ, ಈ ಭಾಗದ ಗ್ರಾಮಸ್ಥರು ಹಾಗೂ ವಾಹನ ಸವಾರರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
ಕಾಡಾನೆ ಕಂಡುಬಂದಲ್ಲಿ ಸಾರ್ವಜನಿಕರು ಅದರ ಸಮೀಪಕ್ಕೆ ತೆರಳದೆ, ತಕ್ಷಣವೇ ಜಿಲ್ಲಾ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ: 7204004261 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಲಾಗಿದೆ.
ರಾತ್ರಿ ವೇಳೆ ಸಂಚರಿಸುವ ಗ್ರಾಮಸ್ಥರು ಹಾಗೂ ವಾಹನ ಸವಾರರು ವಿಶೇಷ ಎಚ್ಚರಿಕೆ ವಹಿಸಿ, ಕಾಡಾನೆಯನ್ನು ಕೆಣಕದಂತೆ ಮತ್ತು ಅದರ ಚಲನವಲನಕ್ಕೆ ಅಡ್ಡಿಪಡಿಸದಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
ದಿನಾಂಕ: 12-08-2026
ಸಮಯ: ಸಂಜೆ 7.00 ಗಂಟೆ
— ಅರಣ್ಯ ಇಲಾಖೆ, ಮೂಡಿಗೆರೆ.
ಮೂಡಿಗೆರೆ : ಕಾನಹಳ್ಳಿ ಕಾಡಿನಲ್ಲಿ ಒಂಟಿ ಆನೆ..?
GNE UPDATES
ಇತ್ತೀಚಿನ ಸುದ್ದಿ