ಮೂಡಿಗೆರೆ, ಆಗಸ್ಟ್ 16: ಮೂಡಿಗೆರೆ ಅರಣ್ಯ ಇಲಾಖೆ ವ್ಯಾಪ್ತಿಯ ಜಾಗರ್‌ಖಾನ್ ಪ್ರದೇಶದಲ್ಲಿ ಮೂರು ಕಾಡಾನೆಗಳು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ.

ಜಾಗರ್‌ಖಾನ್ ಸೇರಿದಂತೆ ದುಂಡುಗ, ಹಳಸೆ, ಜಾಗರಮನೆ, ಮಣ್ಣಿಕೆರೆ, ಶುಭನಗರ ಹಾಗೂ ಚಂದ್ರಪುರ ಗ್ರಾಮಗಳ ಸುತ್ತಮುತ್ತ ಕಾಡಾನೆಗಳ ಸಂಚಾರ ಕಂಡುಬಂದಿರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.

ಈ ಭಾಗದಲ್ಲಿ ಕೆಲಸ ನಿರ್ವಹಿಸುವ ಕೂಲಿ ಕಾರ್ಮಿಕರು ಅರಣ್ಯ ಇಲಾಖೆಯಿಂದ ಅಗತ್ಯ ಮಾಹಿತಿ ಪಡೆದುಕೊಂಡು, ಅತ್ಯಂತ ಜಾಗರೂಕತೆಯಿಂದ ಕೆಲಸ ನಿರ್ವಹಿಸುವಂತೆ ಅರಣ್ಯ ಇಲಾಖೆ ತಿಳಿಸಿದೆ.

ಕಾಡಾನೆಗಳು ಕಂಡುಬಂದಲ್ಲಿ ಸಾರ್ವಜನಿಕರು ಅವುಗಳ ಸಮೀಪ ಹೋಗದೆ, ತಕ್ಷಣವೇ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 7204004261ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.

ಅರಣ್ಯ ಇಲಾಖೆ, ಮೂಡಿಗೆರೆ
ದಿನಾಂಕ: 16-08-2026 | ಸಮಯ: ಬೆಳಿಗ್ಗೆ 8:50.