ಮೂಡಿಗೆರೆ, ಆಗಸ್ಟ್ 17: ಮೂಡಿಗೆರೆ ಅರಣ್ಯ ಇಲಾಖೆ ವ್ಯಾಪ್ತಿಯ ಜಾಗರ್ ಖಾನ್ ಪ್ರದೇಶದಲ್ಲಿ ಮೂರು ಕಾಡಾನೆಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ.

ಜಾಗರ್ ಖಾನ್ ಸೇರಿದಂತೆ ದುಂಡುಗ, ಹಳಸೆ, ಜಾಗರಮನೆ, ಭದ್ರಾಪುರ ಎಸ್ಟೇಟ್, ಮಣ್ಣಿಕೆರೆ, ಶುಭನಗರ ಹಾಗೂ ಚಂದ್ರಪುರ ಗ್ರಾಮಗಳ ಸುತ್ತಮುತ್ತ ಕಾಡಾನೆಗಳ ಸಂಚಾರ ಇರುವ ಸಾಧ್ಯತೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.

ಕಾಡಾನೆಗಳು ಕಂಡುಬಂದಲ್ಲಿ ಅವುಗಳ ಸಮೀಪ ತೆರಳದೆ, ಅವುಗಳನ್ನು ಪ್ರಚೋದಿಸದೆ, ತಕ್ಷಣ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ – 7204004261 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಅರಣ್ಯ ಇಲಾಖೆ ತಿಳಿಸಿದೆ.

ಸಾರ್ವಜನಿಕರು ರಾತ್ರಿ ಹಾಗೂ ಮುಂಜಾನೆ ಸಮಯದಲ್ಲಿ ವಿಶೇಷ ಎಚ್ಚರಿಕೆ ವಹಿಸಿ, ಅರಣ್ಯ ಇಲಾಖೆ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.

ದಿನಾಂಕ: 17-08-2026
ಸಮಯ: ಸಂಜೆ 6:20
ಮಾಹಿತಿ: ಅರಣ್ಯ ಇಲಾಖೆ, ಮೂಡಿಗೆರೆ.