ಮೂಡಿಗೆರೆ, ಸೆಪ್ಟೆಂಬರ್ 24:
ಜಿ. ಹೊಸಹಳ್ಳಿ ಟಾಟಾ ಕಾಫಿ ಎಸ್ಟೇಟ್‌ನಲ್ಲಿ ಕಾಣಿಸಿಕೊಂಡಿದ್ದ ಎರಡು ಕಾಡಾನೆಗಳು ಇದೀಗ ಕಾನಹಳ್ಳಿ ಕಾಡಿನ ಕಡೆಗೆ ತೆರಳಿರುವುದಾಗಿ ಮೂಡಿಗೆರೆ ಅರಣ್ಯ ಇಲಾಖೆ ತಿಳಿಸಿದೆ.
ಕಾಡಾನೆಗಳು ರಾತ್ರಿ ವೇಳೆ ಮತ್ತೆ ಜನವಸತಿ ಹಾಗೂ ಎಸ್ಟೇಟ್‌ಗಳ ಸುತ್ತಮುತ್ತ ಸಂಚರಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿ. ಹೊಸಹಳ್ಳಿ ಟಾಟಾ ಕಾಫಿ ಎಸ್ಟೇಟ್, ಸಿಲ್ವರ್ ಖಾನ್ ಎಸ್ಟೇಟ್, ಜಿ. ಹೊಸಹಳ್ಳಿ ಗ್ರಾಮ, ಪೋಡಿಯ ಕಾಲೋನಿ, ದಿಣ್ಣೆಕೆರೆ ಹಾಗೂ ಕೆಮ್ಮಣ್ಣುಗಂಡಿ ಸುತ್ತಮುತ್ತಲಿನ ಗ್ರಾಮಸ್ಥರು, ಕಾರ್ಮಿಕರು ಮತ್ತು ವಾಹನ ಸವಾರರು ಅತ್ಯಂತ ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
ವಿಶೇಷವಾಗಿ ರಾತ್ರಿ ಸಮಯದಲ್ಲಿ ಅನಗತ್ಯ ಸಂಚಾರ ಹಾಗೂ ಎಚ್ಚರಿಕೆ ಇಲ್ಲದೆ ಕಾಡು ಪ್ರದೇಶದತ್ತ ತೆರಳುವುದನ್ನು ತಪ್ಪಿಸುವಂತೆ ಸೂಚಿಸಲಾಗಿದೆ.
ಯಾರಿಗಾದರೂ ಕಾಡಾನೆಗಳು ಕಾಣಿಸಿಕೊಂಡಲ್ಲಿ ಅವುಗಳ ಸಮೀಪಕ್ಕೆ ಹೋಗದೆ, ಸುರಕ್ಷಿತ ಅಂತರ ಕಾಯ್ದುಕೊಂಡು ತಕ್ಷಣ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ – 7204004261 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಅರಣ್ಯ ಇಲಾಖೆ ತಿಳಿಸಿದೆ.
ದಿನಾಂಕ: 24-09-2026
ಸಮಯ: ಸಂಜೆ 05:20.
ಎರಡು ಕಾಡಾನೆಗಳ ಸಂಚಾರ: ಅರಣ್ಯ ಇಲಾಖೆ ಎಚ್ಚರಿಕೆ!
GNE UPDATES
ಇತ್ತೀಚಿನ ಸುದ್ದಿ