ಮೂಡಿಗೆರೆ, ಅ.05: ಬಿದರಹಳ್ಳಿ ಗ್ರಾಮದ ಸುತ್ತಮುತ್ತಲಿನ ತೋಟಗಳಲ್ಲಿ ಒಂಟಿ ಕಾಡಾನೆಯೊಂದು ಸಂಚರಿಸುತ್ತಿರುವ ಮಾಹಿತಿ ಲಭ್ಯವಾಗಿದ್ದು, ಅರಣ್ಯ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.

ಕೆಂಜಿಗೆ, ಬಾಳೆಹಳ್ಳಿ, ಬಿದರಹಳ್ಳಿ ಹಾಗೂ ಹಾರ್ಗೋಡು ಸುತ್ತಮುತ್ತಲಿನ ಕಾಫಿ ತೋಟಗಳಲ್ಲಿ ಕೆಲಸ ನಿರ್ವಹಿಸುವ ಕೂಲಿ ಕಾರ್ಮಿಕರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಎಚ್ಚರಿಕೆಯಿಂದ ಸಂಚರಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ. ವಾಹನ ಸವಾರರು ಕೂಡ ಈ ಪ್ರದೇಶಗಳಲ್ಲಿ ಸಂಚರಿಸುವಾಗ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಕಾಡಾನೆ ಸಂಚಾರದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯಿಂದ ಮಾಹಿತಿ ಪಡೆದುಕೊಂಡು ಮಾತ್ರ ತೋಟದ ಕೆಲಸ ಸೇರಿದಂತೆ ಇತರೆ ಚಟುವಟಿಕೆಗಳನ್ನು ನಿರ್ವಹಿಸುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.

ಕಾಡಾನೆ ಕಂಡುಬಂದಲ್ಲಿ ಸಾರ್ವಜನಿಕರು ಅದರ ಸಮೀಪಕ್ಕೆ ತೆರಳದೆ, ತಕ್ಷಣ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ: 7204004261 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಅರಣ್ಯ ಇಲಾಖೆ ತಿಳಿಸಿದೆ.

ದಿನಾಂಕ: 05-10-2026
ಸಮಯ: ಮಧ್ಯಾಹ್ನ 12:23.