ಮೂಡಿಗೆರೆ, ನವೆಂಬರ್ 26: ಮಾಕೋನಹಳ್ಳಿ ರಾಮ ಮಂದಿರದ ಸಮೀಪದ ಪ್ಲಾಂಟರ್ಸ್ ಕ್ಲಬ್ ಬಳಿ ಒಂಟಿ ಕಾಡಾನೆಯೊಂದು ಸಂಚರಿಸುತ್ತಿರುವ ಬಗ್ಗೆ ಜಿಲ್ಲಾ ಆನೆ ಕಾರ್ಯಪಡೆ ಚಿಕ್ಕಮಗಳೂರು ಹಾಗೂ ಅರಣ್ಯ ಇಲಾಖೆ ಮೂಡಿಗೆರೆ ವತಿಯಿಂದ ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ ನೀಡಲಾಗಿದೆ.

ಕಾರ್ ಬೈಲು, ಮೂಡಸಸಿ, ತುದಿಯಲ, ಬಾರದಹಳ್ಳಿ, ಮಾಕೋನಹಳ್ಳಿ, ಹೊರಟ್ಟಿ, ಚಂದ್ರಪುರ ಹಾಗೂ ಘಟ್ಟದಹಳ್ಳಿ ಗ್ರಾಮಗಳ ಸುತ್ತಮುತ್ತಲಿನ ನಿವಾಸಿಗಳು ಮತ್ತು ಸಾರ್ವಜನಿಕರು ಅತ್ಯಂತ ಜಾಗರೂಕತೆಯಿಂದ ಇರಬೇಕೆಂದು ಅರಣ್ಯ ಇಲಾಖೆ ಮನವಿ ಮಾಡಿದೆ.

ರಾತ್ರಿ ಸಮಯದಲ್ಲಿ ಅನಗತ್ಯವಾಗಿ ಹೊರಗೆ ಸಂಚರಿಸದಂತೆ ಹಾಗೂ ಕಾಡಾನೆ ಇರುವ ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಮ್ಮ ಗ್ರಾಮಗಳ ವ್ಯಾಪ್ತಿಯಲ್ಲಿ ಕಾಡಾನೆಗಳ ಸಂಚಾರ ಕಂಡುಬಂದಲ್ಲಿ ತಕ್ಷಣವೇ ಜಿಲ್ಲಾ ಆನೆ ಕಾರ್ಯಪಡೆ ಚಿಕ್ಕಮಗಳೂರು ತಂಡಕ್ಕೆ ಮಾಹಿತಿ ನೀಡುವಂತೆ ಕೋರಲಾಗಿದೆ.

ತುರ್ತು ಸಂಪರ್ಕ ಸಂಖ್ಯೆ: 7204004261

ಕಾಡಾನೆಗಳ ಚಲನವಲನದ ಬಗ್ಗೆ ಮಾಹಿತಿ ನೀಡುವ ಮೂಲಕ ಅರಣ್ಯ ಇಲಾಖೆ ಕಾರ್ಯಾಚರಣೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಕಟಣೆ: ಜಿಲ್ಲಾ ಆನೆ ಕಾರ್ಯಪಡೆ, ಚಿಕ್ಕಮಗಳೂರು ಹಾಗೂ ಅರಣ್ಯ ಇಲಾಖೆ, ಮೂಡಿಗೆರೆ.

ದಿನಾಂಕ: 26-11-2026
ಸಮಯ: ರಾತ್ರಿ 08:55.