ಮೂಡಿಗೆರೆ, ನವೆಂಬರ್ 27:
ಚಿಕ್ಕಮಗಳೂರು ಜಿಲ್ಲಾ ಆನೆ ಕಾರ್ಯಪಡೆ ಹಾಗೂ ಮೂಡಿಗೆರೆ ಅರಣ್ಯ ಇಲಾಖೆಯ ಪ್ರಕಟಣೆಯ ಪ್ರಕಾರ, ಮಾಕೋನಹಳ್ಳಿ ಹೊರಟ್ಟಿ ಪ್ರದೇಶದ ದೇವೇಗೌಡ ಅವರ ತೋಟದಲ್ಲಿ ಕಾಡಾನೆಗಳ ಗುಂಪು ಕಾಣಿಸಿಕೊಂಡಿದೆ.

ಈ ಹಿನ್ನೆಲೆಯಲ್ಲಿ ಬಾರದಹಳ್ಳಿ, ಮಾಕೋನಹಳ್ಳಿ, ಹೊರಟ್ಟಿ, ಚಂದ್ರಪುರ, ಘಟ್ಟದಹಳ್ಳಿ, ಕೆಲ್ಲೂರು, ದುಂಡುಗ, ಕುನ್ನಹಳ್ಳಿ ಹಾಗೂ ಹಳಸೆ ಗ್ರಾಮಗಳ ಸುತ್ತಮುತ್ತಲಿನ ಸಾರ್ವಜನಿಕರು, ಗ್ರಾಮಸ್ಥರು, ವಾಹನ ಸವಾರರು ಮತ್ತು ತೋಟದ ಕಾರ್ಮಿಕರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.

ಕಾಫಿ ತೋಟಗಳಲ್ಲಿ ಕೆಲಸ ನಿರ್ವಹಿಸದಂತೆ ಸೂಚನೆ

ಕಾಡಾನೆಗಳ ಸಂಚಾರವಿರುವ ಹಿನ್ನೆಲೆಯಲ್ಲಿ ಈ ಭಾಗದ ಗ್ರಾಮಗಳ ಕಾಫಿ ತೋಟಗಳಲ್ಲಿ ಸದ್ಯಕ್ಕೆ ಕೆಲಸ ನಿರ್ವಹಿಸದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಅನಗತ್ಯವಾಗಿ ಆನೆಗಳು ಸಂಚರಿಸುವ ಪ್ರದೇಶಗಳಿಗೆ ತೆರಳಬಾರದು ಹಾಗೂ ವಾಹನ ಸವಾರರು ಸಂಚರಿಸುವಾಗ ವಿಶೇಷ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಲಾಗಿದೆ.

ತಮ್ಮ ಗ್ರಾಮಗಳ ವ್ಯಾಪ್ತಿಯಲ್ಲಿ ಕಾಡಾನೆಗಳ ಸಂಚಾರ ಕಂಡುಬಂದಲ್ಲಿ ತಕ್ಷಣವೇ ಜಿಲ್ಲಾ ಆನೆ ಕಾರ್ಯಪಡೆ ಚಿಕ್ಕಮಗಳೂರು ತಂಡಕ್ಕೆ ಮಾಹಿತಿ ನೀಡುವಂತೆ ಕೋರಲಾಗಿದೆ.

ತುರ್ತು ಸಂಪರ್ಕ ಸಂಖ್ಯೆ: 7204004261

ಕಾಡಾನೆಗಳಿಂದ ಸಂಭವಿಸಬಹುದಾದ ಅಪಾಯಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಅರಣ್ಯ ಇಲಾಖೆಯ ಸೂಚನೆಗಳನ್ನು ಪಾಲಿಸಿ ಸಹಕರಿಸುವಂತೆ ಜಿಲ್ಲಾ ಆನೆ ಕಾರ್ಯಪಡೆ ಮನವಿ ಮಾಡಿದೆ.

ದಿನಾಂಕ: 27-11-2026
ಸಮಯ: ಬೆಳಿಗ್ಗೆ 08:46.