ಮೂಡಿಗೆರೆ, ಆಗಸ್ಟ್ 6: ಮೂಡಿಗೆರೆ ಅರಣ್ಯ ಇಲಾಖೆಯ ಮಾಹಿತಿ ಪ್ರಕಾರ, ಮೂರು ಕಾಡಾನೆಗಳು ಜಾಗರ ಖಾನ್ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ಕಂಡುಬಂದಿವೆ.
ಈ ಹಿನ್ನೆಲೆಯಲ್ಲಿ ದುಂಡುಗ, ಹಳಸೆ, ಜಾಗರ ಖಾನ್, ಜಾಗರಮನೆ, ಮಣ್ಣಿಕೆರೆ, ಶುಭನಗರ ಹಾಗೂ ಚಂದ್ರಪುರ ಗ್ರಾಮಗಳ ಸುತ್ತಮುತ್ತಲಿನ ಗ್ರಾಮಸ್ಥರು, ತೋಟದ ಕಾರ್ಮಿಕರು ಹಾಗೂ ವಾಹನ ಸವಾರರು ಹೆಚ್ಚಿನ ಎಚ್ಚರಿಕೆಯಿಂದ ಸಂಚರಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
ಅಗತ್ಯವಿಲ್ಲದಿದ್ದರೆ ಕಾಡಂಚಿನ ಪ್ರದೇಶಗಳಿಗೆ ತೆರಳುವುದನ್ನು ತಪ್ಪಿಸಬೇಕು. ಕಾಡಾನೆಗಳು ಕಂಡುಬಂದರೆ ಅವುಗಳ ಸಮೀಪಕ್ಕೆ ಹೋಗದೆ ಸುರಕ್ಷಿತ ಅಂತರ ಕಾಯ್ದುಕೊಂಡು ತಕ್ಷಣವೇ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಇಲಾಖೆ ವಿನಂತಿಸಿದೆ.
ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ: 7204004261
ಪ್ರಕಟಣೆ ಸಮಯ: 06-08-2026, ಬೆಳಿಗ್ಗೆ 7:15 ಗಂಟೆ.
– ಅರಣ್ಯ ಇಲಾಖೆ, ಮೂಡಿಗೆರೆ.
ಮೂಡಿಗೆರೆ : ಕಾಡಾನೆಗಳ ಹಾವಳಿ… ಪ್ರಸ್ತುತ ಎಲ್ಲಿವೆ..?
GNE UPDATES
ಇತ್ತೀಚಿನ ಸುದ್ದಿ