ಮೂಡಿಗೆರೆ, ಆಗಸ್ಟ್ 11:
ಮೂಡಿಗೆರೆ ಅರಣ್ಯ ಇಲಾಖೆಯ ಮಾಹಿತಿ ಪ್ರಕಾರ, ಜಾಗರ್ ಖಾನ್ ಪ್ರದೇಶದಲ್ಲಿ ಎರಡು ಕಾಡಾನೆಗಳು ಕಂಡುಬಂದಿವೆ.

ಈ ಹಿನ್ನೆಲೆಯಲ್ಲಿ ದುಂಡುಗ, ಹಳಸೆ, ಜಾಗರ್ ಖಾನ್, ಜಾಗರಮನೆ, ಮಣ್ಣಿಕೆರೆ ಹಾಗೂ ಶುಭನಗರ, ಚಂದ್ರಪುರ ಗ್ರಾಮಗಳ ಸುತ್ತಮುತ್ತ ವಾಸಿಸುವ ಗ್ರಾಮಸ್ಥರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.

ಕಾಡಾನೆಗಳ ಚಲನವಲನ ಕಂಡುಬಂದಲ್ಲಿ ಸಾರ್ವಜನಿಕರು ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 7204004261ಕ್ಕೆ ಕರೆ ಮಾಡಿ ತಕ್ಷಣ ಮಾಹಿತಿ ನೀಡುವಂತೆ ತಿಳಿಸಲಾಗಿದೆ.

ದಿನಾಂಕ: 11-08-2026
ಸಮಯ: ಬೆಳಿಗ್ಗೆ 08:40.