ದಿನಾಂಕ: 13-08-2026
ಸಮಯ: ಬೆಳಿಗ್ಗೆ 07:40
ಮೂಡಿಗೆರೆ ಅರಣ್ಯ ಇಲಾಖೆಯ ಮಾಹಿತಿಯಂತೆ, ಒಂಟಿ ಕಾಡಾನೆಯೊಂದು ಸರ್ವೇ ನಂ. 73ರ ಉದ್ದಿ ಕುಂಬ್ರಿ ಕಾಡಿನಲ್ಲಿ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಜಿ. ಹೊಸಹಳ್ಳಿ ಟಾಟಾ ಕಾಫಿ ಎಸ್ಟೇಟ್, ಜಿ. ಹೊಸಹಳ್ಳಿ ಗ್ರಾಮ, ಪೋಡಿಯ ಕಾಲೋನಿ, ಸಿಲ್ವರ್ ಖಾನ್ ಎಸ್ಟೇಟ್ ಹಾಗೂ ಹೊಸಪುರ ಗ್ರಾಮದ ಸುತ್ತಮುತ್ತ ವಾಸಿಸುವ ಗ್ರಾಮಸ್ಥರು, ತೋಟದ ಕಾರ್ಮಿಕರು ಹಾಗೂ ವಾಹನ ಸವಾರರು ಹೆಚ್ಚಿನ ಎಚ್ಚರಿಕೆಯಿಂದ ಇರಬೇಕಾಗಿ ಅರಣ್ಯ ಇಲಾಖೆ ಮನವಿ ಮಾಡಿದೆ.
ಕಾಡಾನೆಯ ಚಲನವಲನ ಕಂಡುಬಂದಲ್ಲಿ ಅಥವಾ ಯಾವುದೇ ಮಾಹಿತಿ ಲಭ್ಯವಾದಲ್ಲಿ ತಕ್ಷಣವೇ ಜಿಲ್ಲಾ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 7204004261 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ವಿನಂತಿಸಲಾಗಿದೆ.
– ಅರಣ್ಯ ಇಲಾಖೆ, ಮೂಡಿಗೆರೆ.
ಮೂಡಿಗೆರೆ : ಒಂಟಿ ಕಾಡನೆಯೊಂದು ಕಂಡು ಬಂದಿದೆ..?
GNE UPDATES
ಇತ್ತೀಚಿನ ಸುದ್ದಿ