ಮೂಡಿಗೆರೆ, ಆಗಸ್ಟ್ 13: ಶುಭನಗರದ ಶೇಷಕುಮಾರ್ ಹಾಗೂ ಸೀತೆ ಗೌಡ್ರು ಅವರ ತೋಟದ ಭಾಗದಲ್ಲಿ ಮೂರು ಕಾಡಾನೆಗಳು ಕಂಡುಬಂದಿರುವುದಾಗಿ ಅರಣ್ಯ ಇಲಾಖೆ ಮೂಡಿಗೆರೆ ವತಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.
ಜಾಗರಖಾನ್, ಜಾಗರಮನೆ, ಮಣ್ಣಿಕೆರೆ, ಶುಭನಗರ ಹಾಗೂ ಚಂದ್ರಪುರ ಗ್ರಾಮಗಳ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ವಾಹನ ಸವಾರರು ಅತ್ಯಂತ ಎಚ್ಚರಿಕೆಯಿಂದ ಸಂಚರಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
ಈ ಭಾಗದಲ್ಲಿ ಕೆಲಸ ನಿರ್ವಹಿಸುವ ಕೂಲಿ ಕಾರ್ಮಿಕರು ಅತೀ ಜಾಗರೂಕತೆಯಿಂದಿದ್ದು, ಅರಣ್ಯ ಇಲಾಖೆಯಿಂದ ಅಗತ್ಯ ಮಾಹಿತಿ ಪಡೆದುಕೊಂಡು ಕೆಲಸ ನಿರ್ವಹಿಸುವಂತೆ ಸೂಚಿಸಲಾಗಿದೆ.
ಕಾಡಾನೆಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣವೇ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ: 7204004261 ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಅರಣ್ಯ ಇಲಾಖೆ ತಿಳಿಸಿದೆ.
ದಿನಾಂಕ: 13-08-2026
ಸಮಯ: ಬೆಳಿಗ್ಗೆ 08:45
— ಅರಣ್ಯ ಇಲಾಖೆ, ಮೂಡಿಗೆರೆ.
ಮೂಡಿಗೆರೆ : ಕಾಡಾನೆಗಳ ಹಾವಳಿ ತುರ್ತು ಎಚ್ಚರಿಕೆ!
GNE UPDATES
ಇತ್ತೀಚಿನ ಸುದ್ದಿ