ಮೂಡಿಗೆರೆ, ಆಗಸ್ಟ್ 14: ಮೂಡಿಗೆರೆ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಕಾಡಾನೆಗಳ ಸಂಚಾರ ಕಂಡುಬಂದಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಸೂಚಿಸಿದೆ.

ಜಾಗರಖಾನ್ ಪ್ರದೇಶದಲ್ಲಿ ಎರಡು ಕಾಡಾನೆಗಳು ಕಂಡುಬಂದಿದ್ದು, ದುಂಡುಗ, ಹಳಸೆ, ಜಾಗರಖಾನ್, ಜಾಗರಮನೆ, ಮಣ್ಣಿಕೆರೆ, ಶುಭನಗರ ಹಾಗೂ ಚಂದ್ರಪುರ ಗ್ರಾಮಗಳ ಸುತ್ತಮುತ್ತ ಕಾಡಾನೆಗಳ ಸಂಚಾರದ ಸಾಧ್ಯತೆ ಇರುವುದರಿಂದ ಗ್ರಾಮಸ್ಥರು, ಕಾರ್ಮಿಕರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಲಾಗಿದೆ.

ಇದೇ ವೇಳೆ ಹೊಸಪುರ ಕಡೆಯಿಂದ ಆನೆ ಮಲ್ಲಪ್ಪ ಗುಡ್ಡ, ಟಿ.ಸಿ. ರುದ್ರೇಗೌಡ್ರು ಕಾಡು ಹಾಗೂ ನಂದಿಬೆಟ್ಟ ಎಸ್ಟೇಟ್ ಭಾಗದ ಕಡೆಗೆ ಒಂಟಿ ಕಾಡಾನೆಯೊಂದು ಸಂಚರಿಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಭಾಗದ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ವಾಹನ ಸವಾರರು ಕೂಡ ಮುನ್ನೆಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ತಿಳಿಸಿದೆ.

ಕಾಡಾನೆಗಳು ಕಂಡುಬಂದಲ್ಲಿ ಸಾರ್ವಜನಿಕರು ಅವುಗಳ ಸಮೀಪಕ್ಕೆ ತೆರಳದೆ, ತಕ್ಷಣ ಜಿಲ್ಲಾ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ: 7204004261 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.

ದಿನಾಂಕ: 14.08.2026
ಅರಣ್ಯ ಇಲಾಖೆ, ಮೂಡಿಗೆರೆ.