ಮೂಡಿಗೆರೆ, ಆಗಸ್ಟ್ 17, 2026: ಮೂಡಿಗೆರೆ ಅರಣ್ಯ ಇಲಾಖೆ ವ್ಯಾಪ್ತಿಯ ಜಾಗರ್ ಖಾನ್ ಪ್ರದೇಶದಲ್ಲಿ ಮೂರು ಕಾಡಾನೆಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಸಾರ್ವಜನಿಕರಿಗೆ ಸೂಚನೆ ನೀಡಿದೆ.

ಜಾಗರ್ ಖಾನ್ ಸೇರಿದಂತೆ ದುಂಡುಗ, ಹಳಸೆ, ಜಾಗರಮನೆ, ಮಣ್ಣಿಕೆರೆ, ಶುಭನಗರ ಹಾಗೂ ಚಂದ್ರಪುರ ಗ್ರಾಮಗಳ ಸುತ್ತಮುತ್ತ ಕಾಡಾನೆಗಳ ಸಂಚಾರ ಇರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹೆಚ್ಚಿನ ಜಾಗರೂಕತೆ ವಹಿಸುವಂತೆ ಮನವಿ ಮಾಡಲಾಗಿದೆ.

ಈ ಭಾಗಗಳಲ್ಲಿ ಕೆಲಸ ನಿರ್ವಹಿಸುವ ಕೂಲಿ ಕಾರ್ಮಿಕರು ಅತೀ ಎಚ್ಚರಿಕೆಯಿಂದಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡ ನಂತರವೇ ಕೆಲಸ ನಿರ್ವಹಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ.

ಕಾಡಾನೆಗಳು ಕಂಡುಬಂದಲ್ಲಿ ಸಾರ್ವಜನಿಕರು ಅವುಗಳ ಸಮೀಪ ಹೋಗದೆ, ತಕ್ಷಣ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 7204004261ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಲಾಗಿದೆ.

ಪ್ರಕಟಣೆ: ಅರಣ್ಯ ಇಲಾಖೆ, ಮೂಡಿಗೆರೆ
ದಿನಾಂಕ: 17-08-2026
ಸಮಯ: ಬೆಳಗ್ಗೆ 8:30.