ಮೂಡಿಗೆರೆ, ಆಗಸ್ಟ್ 18: ಮೂಡಿಗೆರೆ ತಾಲ್ಲೂಕಿನ ಹಳಸೆ–ಕುಪ್ಪೆಗದ್ದೆ ಎಸ್ಟೇಟ್ ಭಾಗದಲ್ಲಿ ಕಾಡಾನೆಗಳು ಸಂಚರಿಸುತ್ತಿರುವ ಹಿನ್ನೆಲೆಯಲ್ಲಿ, ಸುತ್ತಮುತ್ತಲಿನ ಗ್ರಾಮಸ್ಥರು, ಕಾರ್ಮಿಕರು ಹಾಗೂ ವಾಹನ ಸವಾರರು ಅತ್ಯಂತ ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಸೂಚಿಸಿದೆ.

ಹಳಸೆ, ಚಂದ್ರಕಾಂತ್ ಎಸ್ಟೇಟ್, ಮುದ್ರೆಮನೆ, ಮುತ್ತಿಗೆಪುರ, ಕುಪ್ಪೆಗದ್ದೆ, ಚಂದ್ರಪುರ, ಬಾರದಹಳ್ಳಿ, ದುಂಡುಗ, ಕೆಲ್ಲೂರು ಹಾಗೂ ಜಾಗರಖಾನ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಡಾನೆಗಳ ಚಲನವಲನ ಕಂಡುಬಂದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.

ಈ ಭಾಗಗಳಲ್ಲಿ ಕೆಲಸ ನಿರ್ವಹಿಸುವ ಕೂಲಿ ಕಾರ್ಮಿಕರು ಅರಣ್ಯ ಇಲಾಖೆಯಿಂದ ಅಗತ್ಯ ಮಾಹಿತಿ ಪಡೆದುಕೊಂಡು, ಕಾಡಾನೆಗಳ ಸಂಚಾರದ ಬಗ್ಗೆ ಎಚ್ಚರಿಕೆ ವಹಿಸಿ ಕೆಲಸ ನಿರ್ವಹಿಸುವಂತೆ ಇಲಾಖೆ ತಿಳಿಸಿದೆ.

ಕಾಡಾನೆಗಳು ಕಂಡುಬಂದಲ್ಲಿ ಸಾರ್ವಜನಿಕರು ಅವುಗಳ ಸಮೀಪ ಹೋಗದೆ, ಅವುಗಳನ್ನು ಪ್ರಚೋದಿಸದೆ, ತಕ್ಷಣ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ – 7204004261 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.

ಪ್ರಕಟಣೆ ದಿನಾಂಕ: 18-08-2026
ಸಮಯ: ಬೆಳಿಗ್ಗೆ 08:03 ಗಂಟೆ
ಮಾಹಿತಿ: ಅರಣ್ಯ ಇಲಾಖೆ, ಮೂಡಿಗೆರೆ.