ಮೂಡಿಗೆರೆ, ಆಗಸ್ಟ್ 18: ಮೂಡಿಗೆರೆ ಅರಣ್ಯ ಇಲಾಖೆ ವ್ಯಾಪ್ತಿಯ ಜಾಗರಖಾನ್ ಪ್ರದೇಶದಲ್ಲಿ ಒಂಟಿ ಕಾಡಾನೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
ಜಾಗರಖಾನ್ ಸುತ್ತಮುತ್ತಲಿನ ದುಂಡುಗ, ಹಳಸೆ, ಜಾಗರಮನೆ, ಮಣ್ಣಿಕೆರೆ, ಶುಭನಗರ ಹಾಗೂ ಚಂದ್ರಪುರ ಗ್ರಾಮಗಳ ನಿವಾಸಿಗಳು ಮತ್ತು ವಾಹನ ಸವಾರರು ಸಂಚರಿಸುವಾಗ ಹೆಚ್ಚಿನ ಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ.
ಕಾಡಾನೆ ಕಂಡುಬಂದಲ್ಲಿ ಅದರ ಸಮೀಪಕ್ಕೆ ತೆರಳದೆ, ತಕ್ಷಣ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ: 7204004261 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಅರಣ್ಯ ಇಲಾಖೆ ತಿಳಿಸಿದೆ.
ದಿನಾಂಕ: 18-08-2026 | ಸಮಯ: ಬೆಳಗ್ಗೆ 8:29.
ಮೂಡಿಗೆರೆ: ಜಾಗರಖಾನ್ನಲ್ಲಿ ಒಂಟಿ ಕಾಡಾನೆ ಪತ್ತೆ — ಗ್ರಾಮಸ್ಥರಿಗೆ ಅರಣ್ಯ ಇಲಾಖೆ ಎಚ್ಚರಿಕೆ
GNE UPDATES
ಇತ್ತೀಚಿನ ಸುದ್ದಿ