ಮೂಡಿಗೆರೆ, ಆಗಸ್ಟ್ 19: ಮೂಡಿಗೆರೆ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಮೂರು ಕಾಡಾನೆಗಳು ಸಂಚರಿಸುತ್ತಿರುವ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು, ಕಾರ್ಮಿಕರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ.
ಮೂರು ಕಾಡಾನೆಗಳು ಕಾರ್ ಬೈಲು, ಶಿವಾನಂದ್ ಅವರ ತೋಟ, ಮಂಜುನಾಥ್ ಗೌಡ್ರು ಅವರ ತೋಟ ಹಾಗೂ ವಿರೇಶ್ ಗೌಡ್ರು ಅವರ ತೋಟದ ಭಾಗಗಳಲ್ಲಿ ಸಂಚರಿಸುತ್ತಿರುವುದು ಕಂಡುಬಂದಿದೆ.
ಈ ಹಿನ್ನೆಲೆಯಲ್ಲಿ ಗಬ್ಬಳ್ಳಿ, ಪುರ, ಚಟ್ಟನಹಳ್ಳಿ, ಹುಲಿ ಹಂಡ್ಲು ಎಸ್ಟೇಟ್, ಕಲ್ಲುಗುಡ್ಡ ಹಾಗೂ ಕಮ್ಮಾರಗೋಡು ಎಸ್ಟೇಟ್ ಸುತ್ತಮುತ್ತಲಿನ ಗ್ರಾಮಸ್ಥರು, ಕಾರ್ಮಿಕರು ಮತ್ತು ವಾಹನ ಸವಾರರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
ಕಾಡಾನೆಗಳು ಕಂಡುಬಂದಲ್ಲಿ ಸಾರ್ವಜನಿಕರು ಅವುಗಳ ಸಮೀಪಕ್ಕೆ ತೆರಳದೆ, ತಕ್ಷಣವೇ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ: 7204004261 ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಲಾಗಿದೆ.
ದಿನಾಂಕ: 19-08-2026
ಸಮಯ: ಬೆಳಿಗ್ಗೆ 08:02.
ಮೂಡಿಗೆರೆ:ತಾಲ್ಲೂಕಿನಲ್ಲಿ ಮೂರು ಕಾಡಾನೆಗಳ ಸಂಚಾರ: ಅರಣ್ಯ ಇಲಾಖೆ ಎಚ್ಚರಿಕೆ!
GNE UPDATES
ಇತ್ತೀಚಿನ ಸುದ್ದಿ