ಮೂಡಿಗೆರೆ, ಆಗಸ್ಟ್ 22: ಮೂಡಿಗೆರೆ ಅರಣ್ಯ ಇಲಾಖೆ ವ್ಯಾಪ್ತಿಯ ಕಾರ್ ಬೈಲು ಗ್ರಾಮದ ಅವಿನಾಶ್ ಅವರ ಶುಂಠಿ ಗದ್ದೆಯ ಕೆಳಭಾಗದಲ್ಲಿರುವ ತೋಟದಲ್ಲಿ ಮೂರು ಕಾಡಾನೆಗಳು ಕಂಡುಬಂದಿದ್ದು, ಆನೆಗಳು ಆ ಪ್ರದೇಶದಲ್ಲಿ ಸಂಚರಿಸುತ್ತಿವೆ ಎಂದು ಅರಣ್ಯ ಇಲಾಖೆ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಕಾರ್ ಬೈಲು, ತುದಿಯಲ, ಬಾರದಹಳ್ಳಿ ಹಾಗೂ ಚಂದ್ರಪುರ ಗ್ರಾಮಗಳ ಸುತ್ತಮುತ್ತಲಿನ ಗ್ರಾಮಸ್ಥರು, ಕಾರ್ಮಿಕರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
ಕಾಡಾನೆಗಳು ಕಂಡುಬಂದಲ್ಲಿ ಸಾರ್ವಜನಿಕರು ಆನೆಗಳ ಸಮೀಪ ಹೋಗದೆ, ಅವುಗಳನ್ನು ಪ್ರಚೋದಿಸದೆ, ತಕ್ಷಣ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 7204004261 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.
ದಿನಾಂಕ: 22.08.2026 | ಸಮಯ: ಬೆಳಿಗ್ಗೆ 08:04.
ಮೂಡಿಗೆರೆ: ಮೂರು ಕಾಡಾನೆಗಳ ಸಂಚಾರ — ಗ್ರಾಮಸ್ಥರಿಗೆ ಅರಣ್ಯ ಇಲಾಖೆ ಎಚ್ಚರಿಕೆ!
GNE UPDATES
ಇತ್ತೀಚಿನ ಸುದ್ದಿ