ಮೂಡಿಗೆರೆ :22.08.26 ಅರಣ್ಯ ಇಲಾಖೆ ವ್ಯಾಪ್ತಿಯ ಕಾರ್ ಬೈಲು ಗ್ರಾಮದ ಅವಿನಾಶ್ ಅವರ ಶುಂಠಿ ಗದ್ದೆಯಲ್ಲಿ ಮೂರು ಕಾಡಾನೆಗಳು ಕಂಡುಬಂದಿದ್ದು, ಸದ್ಯವೂ ಆನೆಗಳು ಈ ಭಾಗದಲ್ಲಿ ಸಂಚರಿಸುತ್ತಿವೆ ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ.
ಈ ಹಿನ್ನೆಲೆಯಲ್ಲಿ ಕಾರ್ ಬೈಲು, ತುದಿಯಲ, ಬಾರದಹಳ್ಳಿ ಹಾಗೂ ಚಂದ್ರಪುರ ಗ್ರಾಮಗಳ ಸುತ್ತಮುತ್ತಲಿನ ಗ್ರಾಮಸ್ಥರು, ಕಾರ್ಮಿಕರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
ಕಾಡಾನೆಗಳು ಕಂಡುಬಂದಲ್ಲಿ ಸಾರ್ವಜನಿಕರು ಅವುಗಳ ಸಮೀಪಕ್ಕೆ ತೆರಳದೆ, ತಕ್ಷಣವೇ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 7204004261ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಲಾಗಿದೆ.
ದಿನಾಂಕ: 22.08.2026 | ಸಮಯ: ಸಂಜೆ 7:58.
ಮೂಡಿಗೆರೆ: ಕಾಡಾನೆಗಳ ಸಂಚಾರ – ಸಾರ್ವಜನಿಕರಿಗೆ ಎಚ್ಚರಿಕೆ!
GNE UPDATES
ಇತ್ತೀಚಿನ ಸುದ್ದಿ