ಮೂಡಿಗೆರೆ, ಆಗಸ್ಟ್ 23:
ಮೂಡಿಗೆರೆ ಅರಣ್ಯ ಇಲಾಖೆ ವ್ಯಾಪ್ತಿಯ ಕಾರ್ ಬೈಲು ಗ್ರಾಮದ ಅವಿನಾಶ್ ಅವರ ತೋಟದಲ್ಲಿ ಮೂರು ಕಾಡಾನೆಗಳು ಕಂಡುಬಂದಿದ್ದು, ಸುತ್ತಮುತ್ತಲ ಪ್ರದೇಶದಲ್ಲಿ ಸಂಚರಿಸುತ್ತಿರುವುದು ಗಮನಕ್ಕೆ ಬಂದಿದೆ.
ಈ ಹಿನ್ನೆಲೆಯಲ್ಲಿ ಕಾರ್ ಬೈಲು, ತುದಿಯಲ, ಬಾರದಹಳ್ಳಿ ಹಾಗೂ ಚಂದ್ರಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು, ಕಾರ್ಮಿಕರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
ಕಾಡಾನೆಗಳು ಕಂಡುಬಂದಲ್ಲಿ ಅವುಗಳ ಸಮೀಪ ತೆರಳದೆ, ಯಾವುದೇ ರೀತಿಯಲ್ಲಿ ಪ್ರಚೋದಿಸದೆ, ತಕ್ಷಣವೇ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ – 7204004261 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಇಲಾಖೆ ತಿಳಿಸಿದೆ.
ದಿನಾಂಕ: 23.08.2026
ಸಮಯ: ಬೆಳಿಗ್ಗೆ 7:58.
ಮೂಡಿಗೆರೆ : ಕಾಡಾನೆಗಳ ಸಂಚಾರ: ಗ್ರಾಮಸ್ಥರು, ವಾಹನ ಸವಾರರಿಗೆ ಎಚ್ಚರಿಕೆ!
GNE UPDATES
ಇತ್ತೀಚಿನ ಸುದ್ದಿ