ಆಲ್ದೂರು ಅರಣ್ಯ ಇಲಾಖೆ ಹಾಗೂ ಜಿಲ್ಲಾ ಆನೆ ಕಾರ್ಯಪಡೆ, ಚಿಕ್ಕಮಗಳೂರು ಇವರ ಪ್ರಕಟಣೆ

ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಅರಣ್ಯ ವ್ಯಾಪ್ತಿಯ ಕರಡಿಗಂಡಿ ಎಸ್ಟೇಟ್‌ನಿಂದ ಒಂಟಿ ಕಾಡಾನೆಯೊಂದು ಸಂಚಾರಿಸುತ್ತಿರುವುದು ಗಮನಕ್ಕೆ ಬಂದಿದೆ. ಕಾಡಾನೆಯು ಕೋಣಬಸುರಿ, ಹರವಿನಗಂಡಿ ಪಾಳ್ಯ, ಸತ್ತಿಹಳ್ಳಿ, ಗುಲನ್ ಪೇಟೆ, ಹಾಂದಿ, ಕಂಡರಕಸ್ಕೆ, ಕಠರಾದಹಳ್ಳಿ ಹಾಗೂ ಇಳೇಖಾನ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚರಿಸುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಈ ಹಿನ್ನೆಲೆಯಲ್ಲಿ ಮೇಲ್ಕಂಡ ಗ್ರಾಮಗಳ ಸುತ್ತಮುತ್ತಲಿನ ಗ್ರಾಮಸ್ಥರು, ವಾಹನ ಸವಾರರು ಹಾಗೂ ಕೂಲಿ ಕಾರ್ಮಿಕರು ಅತ್ಯಂತ ಎಚ್ಚರಿಕೆಯಿಂದ ಇರಬೇಕು. ವಿಶೇಷವಾಗಿ ರಾತ್ರಿ ವೇಳೆಯಲ್ಲಿ ಅನಾವಶ್ಯಕವಾಗಿ ರಸ್ತೆಯಲ್ಲಿ ಸಂಚರಿಸದಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.

ಕಾಡಾನೆ ಸಂಚಾರ ಕಂಡುಬಂದಲ್ಲಿ ಸಾರ್ವಜನಿಕರು ಅದನ್ನು ಹಿಂಬಾಲಿಸದೆ, ಸಮೀಪಿಸದೆ, ಸುರಕ್ಷಿತ ಅಂತರ ಕಾಯ್ದುಕೊಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.

ಪ್ರಕಟಣೆ:
ಆಲ್ದೂರು ಅರಣ್ಯ ಇಲಾಖೆ ಹಾಗೂ ಜಿಲ್ಲಾ ಆನೆ ಕಾರ್ಯಪಡೆ, ಚಿಕ್ಕಮಗಳೂರು.

ದಿನಾಂಕ: 26-08-2026
ಸಮಯ: ಸಂಜೆ 05:21.