ಮೂಡಿಗೆರೆ, ಆಗಸ್ಟ್ 26, 2026: ಹರವಿನಗಂಡಿ ಪಾಳ್ಯದ ಚಂದ್ರೇಗೌಡ ಅವರ ತೋಟದ ಭಾಗದಿಂದ ಒಂಟಿ ಕಾಡಾನೆಯೊಂದು ಸಂಚಾರಿಸುತ್ತಿರುವುದು ಕಂಡುಬಂದಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು, ವಾಹನ ಸವಾರರು ಹಾಗೂ ಕೂಲಿ ಕಾರ್ಮಿಕರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಹಾಗೂ ಜಿಲ್ಲಾ ಆನೆ ಕಾರ್ಯಪಡೆ ಮನವಿ ಮಾಡಿದೆ.

ಕಾಡಾನೆಯು ಕೋಣಬಸುರಿ, ಹರವಿನಗಂಡಿ ಪಾಳ್ಯ, ಸತ್ತಿಹಳ್ಳಿ, ಗುಲ್ಲನ್ ಪೇಟೆ, ಹಾಂದಿ, ಕಂಡರಕಸ್ಕೆ, ಕಠರಾದಹಳ್ಳಿ ಹಾಗೂ ಇಳೇಖಾನ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಸಂಚರಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು.

ರಾತ್ರಿ ವೇಳೆ ಅನಾವಶ್ಯಕವಾಗಿ ರಸ್ತೆಯಲ್ಲಿ ಸಂಚರಿಸದಂತೆ ಹಾಗೂ ಬೆಳಿಗ್ಗೆ 9 ಗಂಟೆಯ ಮೊದಲು ತೋಟದ ಕೆಲಸಕ್ಕೆ ತೆರಳದಂತೆ ಅರಣ್ಯ ಇಲಾಖೆ ಸೂಚಿಸಿದೆ. ಕಾಡಾನೆ ಸಂಚಾರ ಕಂಡುಬಂದಲ್ಲಿ ಸಾರ್ವಜನಿಕರು ಅದರ ಸಮೀಪಕ್ಕೆ ಹೋಗದೆ, ಸುರಕ್ಷಿತ ಅಂತರ ಕಾಯ್ದುಕೊಂಡು ಅರಣ್ಯ ಇಲಾಖೆಗೆ ತಕ್ಷಣ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.

ಪ್ರಕಟಣೆ:
ಆಲ್ದೂರು ಅರಣ್ಯ ಇಲಾಖೆ ಹಾಗೂ ಜಿಲ್ಲಾ ಆನೆ ಕಾರ್ಯಪಡೆ, ಚಿಕ್ಕಮಗಳೂರು.

ದಿನಾಂಕ: 26-08-2026
ಸಮಯ: ಸಂಜೆ 7:14.