ಆಲ್ದೂರು, ಆಗಸ್ಟ್ 27: ಆಲ್ದೂರು ಅರಣ್ಯ ವ್ಯಾಪ್ತಿಯ ದೊರೆಹಾಂದಿ ಎಸ್ಟೇಟ್ ಪ್ರದೇಶದಲ್ಲಿ ಒಂಟಿ ಕಾಡಾನೆಯೊಂದು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು, ವಾಹನ ಸವಾರರು ಹಾಗೂ ಕೂಲಿ ಕಾರ್ಮಿಕರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಹಾಗೂ ಜಿಲ್ಲಾ ಆನೆ ಕಾರ್ಯಪಡೆ ಚಿಕ್ಕಮಗಳೂರು ಸಾರ್ವಜನಿಕರಿಗೆ ಸೂಚನೆ ನೀಡಿದೆ.
ಕಾಡಾನೆಯು ಹಾಂದಿ, ಮೇಗಳ ಹಾಂದಿ, ಕೆಳಹಾಂದಿ, ನಂದಿಪುರ, ಮೀನಾಕ್ಷಿ ಎಸ್ಟೇಟ್, ಕಡೆಮಾಡ್ಕಲ್ ಹಾಗೂ ವಿಜಯನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚರಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.
ವಿಶೇಷವಾಗಿ ಗ್ರಾಮಸ್ಥರು ಹಾಗೂ ಕೂಲಿ ಕಾರ್ಮಿಕರು ಕಾಡಾನೆ ಸಂಚಾರದ ಪ್ರದೇಶಗಳಲ್ಲಿ ಎಚ್ಚರಿಕೆಯಿಂದ ಇರಬೇಕು. ವಾಹನ ಸವಾರರು ಸಹ ರಾತ್ರಿ ಹಾಗೂ ಮುಂಜಾನೆ ಸಮಯದಲ್ಲಿ ಹೆಚ್ಚಿನ ಜಾಗರೂಕತೆ ವಹಿಸುವಂತೆ ತಿಳಿಸಲಾಗಿದೆ.
ಕಾಡಾನೆ ಕಂಡುಬಂದಲ್ಲಿ ಸಾರ್ವಜನಿಕರು ಅದರ ಸಮೀಪಕ್ಕೆ ತೆರಳದೆ, ಸುರಕ್ಷಿತ ಅಂತರ ಕಾಯ್ದುಕೊಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.
ಪ್ರಕಟಣೆ: ಆಲ್ದೂರು ಅರಣ್ಯ ಇಲಾಖೆ ಹಾಗೂ ಜಿಲ್ಲಾ ಆನೆ ಕಾರ್ಯಪಡೆ, ಚಿಕ್ಕಮಗಳೂರು.
ದಿನಾಂಕ: 27-08-2026
ಸಮಯ: ಬೆಳಿಗ್ಗೆ 09:31.
ಒಂಟಿ ಕಾಡಾನೆ ಸಂಚಾರ: ಸಾರ್ವಜನಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!
GNE UPDATES
ಇತ್ತೀಚಿನ ಸುದ್ದಿ