ಮೂಡಿಗೆರೆ, ಆಗಸ್ಟ್ 27: ಕಲ್ಲುಗುಡ್ಡ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಒಂಟಿ ಕಾಡಾನೆಯೊಂದು ಸಂಚರಿಸುತ್ತಿರುವುದು ಕಂಡುಬಂದಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.
ಕಲ್ಲುಗುಡ್ಡ, ಚಟ್ಟನಹಳ್ಳಿ, ಹುಲಿಹಂಡ್ಲು ಎಸ್ಟೇಟ್ ಹಾಗೂ ಕಸ್ಕೆಬೈಲ್ ಸುತ್ತಮುತ್ತಲಿನ ಗ್ರಾಮಸ್ಥರು ಮತ್ತು ವಾಹನ ಸವಾರರು ವಿಶೇಷವಾಗಿ ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುವಾಗ ಅತ್ಯಂತ ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ. ಕಾಡಾನೆ ಸಂಚಾರ ಇರುವುದರಿಂದ ಸಾರ್ವಜನಿಕರು ಅನಗತ್ಯವಾಗಿ ರಾತ್ರಿ ವೇಳೆ ರಸ್ತೆಯಲ್ಲಿ ಓಡಾಡದಂತೆ ಸೂಚಿಸಲಾಗಿದೆ.
ಕಾಡಾನೆ ಕಂಡುಬಂದಲ್ಲಿ ಅದರ ಸಮೀಪಕ್ಕೆ ತೆರಳದೆ, ತಕ್ಷಣವೇ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ.
ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ: 7204004261
ದಿನಾಂಕ: 27-08-2026
ಸಮಯ: ರಾತ್ರಿ 8.40.
ಕಲ್ಲುಗುಡ್ಡ ಭಾಗದಲ್ಲಿ ಒಂಟಿ ಕಾಡಾನೆ ಸಂಚಾರ: ಸಾರ್ವಜನಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!
GNE UPDATES
ಇತ್ತೀಚಿನ ಸುದ್ದಿ