ಮೂಡಿಗೆರೆ, ಆ.28: ಮೂಡಿಗೆರೆ ಅರಣ್ಯ ಇಲಾಖೆಯ ವ್ಯಾಪ್ತಿಯ ಓಲ್ಡ್ ಭುವನೇಶ್ವರಿ ಗುಂಪಿನ ಕಾಡಾನೆಗಳು ದೊಡ್ಡಗಳ್ಳ ಎಸ್ಟೇಟ್‌ನಲ್ಲಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು, ಕಾರ್ಮಿಕರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
ಕಾಡಾನೆಗಳ ಸಂಚಾರದ ಹಿನ್ನೆಲೆಯಲ್ಲಿ ಕಸ್ಕೆಬೈಲ್, ಕಲ್ಲುಗುಡ್ಡ, ಹೊಸಪುರ, ಆನೆ ಮಲ್ಲಪ್ಪ ಗುಡ್ಡ ಹಾಗೂ ಹುಲಿಹಂಡ್ಲು ಎಸ್ಟೇಟ್ ಸುತ್ತಮುತ್ತಲಿನ ಪ್ರದೇಶಗಳ ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಕಾಡಾನೆಗಳು ಕಂಡುಬಂದ ಸಂದರ್ಭದಲ್ಲಿ ಸಾರ್ವಜನಿಕರು ಅವುಗಳ ಸಮೀಪಕ್ಕೆ ತೆರಳದೆ, ತೊಂದರೆ ನೀಡದೆ, ತಕ್ಷಣವೇ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 7204004261ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಅರಣ್ಯ ಇಲಾಖೆ ತಿಳಿಸಿದೆ.
ದಿನಾಂಕ: 28-08-2026
ಸಮಯ: ಬೆಳಗ್ಗೆ 7.13.
ಮೂಡಿಗೆರೆ : ಕಾಡಾನೆಗಳ ಸಂಚಾರ: ಸಾರ್ವಜನಿಕರಿಗೆ ಎಚ್ಚರಿಕೆ!
GNE UPDATES
ಇತ್ತೀಚಿನ ಸುದ್ದಿ