ಮೂಡಿಗೆರೆ, ಆಗಸ್ಟ್ 29:
ಮೂಡಿಗೆರೆ ಅರಣ್ಯ ಇಲಾಖೆ ವ್ಯಾಪ್ತಿಯ ಭುವನೇಶ್ವರಿ ಗುಂಪಿನ ಕಾಡಾನೆಗಳು ಜಿ. ಹೊಸಹಳ್ಳಿ ಗ್ರಾಮದ ಸರ್ವೇ ನಂ. 73ರ ಉದ್ದಿ ಕುಂಬ್ರಿ ಕಾಡಿನಲ್ಲಿ ಕಂಡುಬಂದಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚರಿಸುತ್ತಿರುವುದಾಗಿ ಅರಣ್ಯ ಇಲಾಖೆ ತಿಳಿಸಿದೆ.
ಕಾಡಾನೆಗಳ ಸಂಚಾರದ ಹಿನ್ನೆಲೆಯಲ್ಲಿ ಹೊಸಪುರ, ಜಿ. ಹೊಸಹಳ್ಳಿ, ಹಸಿರು ಕಾಡು ಎಸ್ಟೇಟ್, ವಿನಾಯಕ ಎಸ್ಟೇಟ್, ಜಿ. ಹೊಸಹಳ್ಳಿ ಹಾಗೂ ಪೋಡಿಯ ಕಾಲೋನಿ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ವಾಹನ ಸವಾರರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
ಕಾಡಾನೆಗಳು ಕಂಡುಬಂದಲ್ಲಿ ಸಾರ್ವಜನಿಕರು ಅವುಗಳ ಸಮೀಪಕ್ಕೆ ತೆರಳದೆ, ತಕ್ಷಣ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 7204004261ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಇಲಾಖೆ ಸೂಚಿಸಿದೆ.
ದಿನಾಂಕ: 29.08.2026 | ಸಮಯ: ಸಂಜೆ 7:28.
ಜಿ. ಹೊಸಹಳ್ಳಿ ಸುತ್ತಮುತ್ತ ಕಾಡಾನೆಗಳ ಸಂಚಾರ: ಸಾರ್ವಜನಿಕರಿಗೆ ಎಚ್ಚರಿಕೆ
GNE UPDATES
ಇತ್ತೀಚಿನ ಸುದ್ದಿ