ಮೂಡಿಗೆರೆ, ಆ.30: ಮೂಡಿಗೆರೆ ಅರಣ್ಯ ಇಲಾಖೆ ವ್ಯಾಪ್ತಿಯ ಜಿ. ಹೊಸಹಳ್ಳಿ ವಿನಾಯಕ ಎಸ್ಟೇಟ್ ಸಮೀಪದ ಕಾಡಿನಲ್ಲಿ ಭುವನೇಶ್ವರಿ ಗುಂಪಿನ ಕಾಡಾನೆಗಳು ಕಂಡುಬಂದಿದ್ದು, ಈ ಭಾಗದಲ್ಲಿ ಸಂಚರಿಸುತ್ತಿರುವುದು ಗಮನಕ್ಕೆ ಬಂದಿದೆ.
ಈ ಹಿನ್ನೆಲೆಯಲ್ಲಿ ಜಿ. ಹೊಸಹಳ್ಳಿ, ಪೋಡಿಯ ಕಾಲೋನಿ, ಹಸಿರು ಕಾಡು ಎಸ್ಟೇಟ್, ವಿನಾಯಕ ಎಸ್ಟೇಟ್ ಹಾಗೂ ಹೊಸಪುರ ಗ್ರಾಮಗಳ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ವಾಹನ ಸವಾರರು ಅತ್ಯಂತ ಎಚ್ಚರಿಕೆಯಿಂದ ಸಂಚರಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
ಕಾಡಾನೆಗಳು ಕಂಡುಬಂದಲ್ಲಿ ಸಾರ್ವಜನಿಕರು ಅವುಗಳ ಸಮೀಪ ತೆರಳದೆ, ಯಾವುದೇ ರೀತಿಯಲ್ಲಿ ಪ್ರಚೋದಿಸದೆ, ತಕ್ಷಣವೇ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ – 7204004261 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಅರಣ್ಯ ಇಲಾಖೆ ತಿಳಿಸಿದೆ.
ದಿನಾಂಕ: 30-08-2026 | ಸಮಯ: ಸಂಜೆ 6.50.
ಜಿ. ಹೊಸಹಳ್ಳಿ ಸುತ್ತಮುತ್ತ ಕಾಡಾನೆಗಳ ಸಂಚಾರ: ಸಾರ್ವಜನಿಕರಿಗೆ ಎಚ್ಚರಿಕೆ
GNE UPDATES
ಇತ್ತೀಚಿನ ಸುದ್ದಿ