ಮೂಡಿಗೆರೆ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಭುವನೇಶ್ವರಿ ಗುಂಪಿನ ಕಾಡಾನೆಗಳು ಪೋಡಿಯ ಕಾಲೋನಿ ಹಾಗೂ ಶೈಲೇಶ್ ಗೌಡ್ರು ಅವರ ತೋಟದ ಭಾಗದಲ್ಲಿ ಸಂಚರಿಸುತ್ತಿರುವುದು ಕಂಡುಬಂದಿದೆ.
ಈ ಹಿನ್ನೆಲೆಯಲ್ಲಿ ಜಿ. ಹೊಸಹಳ್ಳಿ, ಪೋಡಿಯ ಕಾಲೋನಿ ಹಾಗೂ ಟಾಟಾ ಕಾಫಿ ಎಸ್ಟೇಟ್, ಜಿ. ಹೊಸಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು, ಕಾರ್ಮಿಕರು ಹಾಗೂ ವಾಹನ ಸವಾರರು ಅತ್ಯಂತ ಎಚ್ಚರಿಕೆಯಿಂದ ಸಂಚರಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
ಕಾಡಾನೆಗಳು ಕಂಡುಬಂದ ಸಂದರ್ಭದಲ್ಲಿ ಸಾರ್ವಜನಿಕರು ಅವುಗಳ ಸಮೀಪಕ್ಕೆ ತೆರಳದೆ, ಯಾವುದೇ ರೀತಿಯಲ್ಲಿ ಕಾಡಾನೆಗಳನ್ನು ಕೆಣಕದಂತೆ ಎಚ್ಚರಿಕೆ ವಹಿಸಬೇಕು. ಕಾಡಾನೆಗಳ ಚಲನವಲನ ಕಂಡುಬಂದಲ್ಲಿ ತಕ್ಷಣವೇ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.
📞 ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ: 7204004261
ದಿನಾಂಕ: 31-08-2026
ಸಮಯ: ಸಂಜೆ 05:20.
ಮೂಡಿಗೆರೆ: ಕಾಡಾನೆಗಳ ಸಂಚಾರ – ಸಾರ್ವಜನಿಕರಿಗೆ ಎಚ್ಚರಿಕೆ
GNE UPDATES
ಇತ್ತೀಚಿನ ಸುದ್ದಿ