ಮೂಡಿಗೆರೆ, ಸೆ. 3: ಕಾನನಹಳ್ಳಿ ಕಾಡಿನಲ್ಲಿ ಕಾಡಾನೆಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ, ರಾತ್ರಿ ವೇಳೆ ಅವುಗಳು ಜಿ. ಹೊಸಹಳ್ಳಿ ಟಾಟಾ ಕಾಫಿ ಎಸ್ಟೇಟ್ ಕಡೆಗೆ ಬರುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆ ಮೂಡಿಗೆರೆ ಎಚ್ಚರಿಕೆ ನೀಡಿದೆ.
ಕಾಡಾನೆಗಳ ಸಂಚಾರದ ಹಿನ್ನೆಲೆಯಲ್ಲಿ ಜಿ. ಹೊಸಹಳ್ಳಿ, ಪೋಡಿಯ ಕಾಲೋನಿ, ದಿಣ್ಣೆಕೆರೆ ಹಾಗೂ ಕೆಮ್ಮಣ್ಣುಗುಂಡಿ ಸುತ್ತಮುತ್ತಲಿನ ಗ್ರಾಮಸ್ಥರು, ಕಾರ್ಮಿಕರು ಹಾಗೂ ವಾಹನ ಸವಾರರು ರಾತ್ರಿ ವೇಳೆಯಲ್ಲಿ ಅತ್ಯಂತ ಎಚ್ಚರಿಕೆಯಿಂದ ಸಂಚರಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
ಕಾಡಾನೆಗಳು ಕಂಡುಬಂದಲ್ಲಿ ಅವುಗಳನ್ನು ಹತ್ತಿರದಿಂದ ವೀಕ್ಷಿಸಲು ಅಥವಾ ಹಿಂಬಾಲಿಸಲು ಮುಂದಾಗದೆ, ತಕ್ಷಣವೇ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ.
ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ: 7204004261
ಈ ಎಚ್ಚರಿಕೆಯನ್ನು ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ನೀಡಲಾಗಿದ್ದು, ಎಲ್ಲರೂ ಅರಣ್ಯ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.
ದಿನಾಂಕ: 03-09-2026 | ಸಮಯ: ಸಂಜೆ 6.40.
ಕಾನನಹಳ್ಳಿ ಕಾಡಿನಲ್ಲಿ ಕಾಡಾನೆಗಳ ಹಿಂಡು; ಗ್ರಾಮಸ್ಥರಿಗೆ ಅರಣ್ಯ ಇಲಾಖೆ ಎಚ್ಚರಿಕೆ!
GNE UPDATES
ಇತ್ತೀಚಿನ ಸುದ್ದಿ